ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಡಿ ಮಳೆಗೆ ಜನಜೀವನ ಅಸ್ತವ್ಯಸ್ತ

ಸಕಲೇಶಪುರ ತಾಲ್ಲೂಕಿನಲ್ಲಿ ಅಪಾರ ಹಾನಿ, ಧರೆಗುರುಳಿದ ನೂರಾರು ಮರಗಳು
Last Updated 15 ಜುಲೈ 2021, 13:14 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಗುರುವಾರ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯವಸ್ತಗೊಂಡಿದೆ.

ಜಿಲ್ಲೆಯ ವಿವಿಧೆಡೆ ವಿದ್ಯುತ್‌ ಕಂಬಗಳು, ಮರಗಳು ನೆಲಕ್ಕುರುಳಿವೆ. ಶೀತಗಾಳಿ, ಸೋನೆ ಮಳೆಮುಂದುವರಿದಿದೆ. ಬುಧವಾರ ರಾತ್ರಿಯಿಂದಲೇ ಮಳೆ ಬಿರುಸಾಗಿದ್ದು, ಹೇಮಾವತಿ ನದಿಯಲ್ಲಿಹರಿವು ಹೆಚ್ಚಾಗಿದೆ. ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಗುರುವಾರ ದಿನವೀಡಿ ಮಳೆಸುರಿದಿದೆ.

ಮಲೆನಾಡು ಪ್ರದೇಶ ಸಕಲೇಶಪುರ, ಹೆತ್ತೂರು, ಯಸಳೂರು ಭಾಗದಲ್ಲಿ ನಿರಂತರವಾಗಿ ಗಾಳಿ ಮಳೆ ಆಗುತ್ತಿರುವುದರಿಂದ ಅಡಿಕೆ, ಕಾಫಿ ತೋಟ, ಭತ್ತದ ಗದ್ದೆಗಳು ಜಲಾವೃತಗೊಂಡಿವೆ. ಶುಂಠಿ, ಭತ್ತ ಸೇರಿದಂತೆ ತರಕಾರಿ ಬೆಳೆಗಳು ಸಹ ಮಳೆಯಿಂದ ಹಾನಿಯಾಗಿವೆ.

ಕಾಫಿ ತೋಟಗಳಲ್ಲಿ ನೂರಾರು ಮರಗಳು ಉರುಳಿ ಬಿದ್ದಿವೆ. ಹಲವು ಕಡೆ ವಿದ್ಯುತ್ ಕಂಬಗಳು ನೆಲಕಚ್ಚಿವೆ.ಕಾಫಿ ಬೆಳೆಗಾರ ಶೇಖ್ ರಾಜ್ ಅವರಿಗೆ ಸೇರಿದ ಜಮೀನಿನಲ್ಲಿ ಹಳ್ಳ ತುಂಬಿ ಹರಿಯುತ್ತಿರುವ ಕಾರಣ ಬೆಳೆ ನಷ್ಟದ ಭೀತಿ
ಎದುರಾಗಿದೆ.

ಆನೆಮಹಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡಾನಗುಡ್ಡೆ ಬಳಿ‌ ಗೆರೆ ಕುಸಿತವಾಗಿದ್ದು, ಮನೆಗಳುಹಾಗೂ ಅಂಗನವಾಡಿ ಕಟ್ಟಡ ಕುಸಿದು ಬೀಳುವ ಸಾಧ್ಯತೆ ಇದೆ. ಗೆರೆಯ ಮೇಲ್ಭಾಗಹದಿನೈದುಮನೆಗಳಲ್ಲಿ ಮುಸ್ಲಿಂ ಕುಟುಂಬ ವಾಸಿಸುತ್ತಿವೆ.ಕಳೆದ ಬಾರಿಯೂ ಈ ಗ್ರಾಮದಲ್ಲಿಭೂಕುಸಿತವಾಗಿ ಮನೆಯಲ್ಲಿದ್ದವರನ್ನು ಸ್ಥಳಾಂತರಿಸಲಾಗಿತ್ತು.

ಅರಕಲಗೂಡು ತಾಲ್ಲೂಕಿನಲ್ಲಿ ಐದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕೆರೆ, ಕಟ್ಟೆಗಳಒಡಲಿಗೆ ನೀರು ಹರಿದು ಬರುತ್ತಿದೆ. ಹೇಮಾವತಿ ಮತ್ತು ಕಾವೇರಿ ನದಿಯಲ್ಲಿ ನೀರಿನ ಹರಿವುಹೆಚ್ಚಿದೆ. ಬೆಳೆಗಳು ಹಸಿರಿನಿಂದ ನಳನಳಿಸುತ್ತಿದ್ದು, ಅನ್ನದಾತರಲ್ಲಿ ಆಶಾಭಾವನೆ ಮೂಡಿಸಿದೆ.

ಸೋನೆ ಮಳೆ ಒಂದೆಡೆ ಬೆಳೆಗಳಿಗೆ ಜೀವಸೆಲೆ ಒದಗಿಸಿದರೆ ಮತ್ತೊಂದೆಡೆ ರೈತರ ಕೃಷಿ ಕಾರ್ಯಕ್ಕೆ ಅಡಚಣೆ ಉಂಟು ಮಾಡಿತ್ತು. ಬೆಳಿಗ್ಗೆಯಿಂದಲೇ ಬೀಳುತ್ತಿದ್ದ ಮಳೆಯಿಂದ ಕೃಷಿಕರುಜಮೀನಿನತ್ತ ತೆರಳಲು ಹಿಂದೇಟು ಹಾಕುವಂತಾಯಿತು. ಮಳೆಯಲ್ಲಿ ತೋಯ್ದುಕೊಂಡೇ ಹೊಗೆಸೊಪ್ಪು ಕಟಾವು ನಡೆಸಿದರು.

ನದಿ ಪಾತ್ರದ ಜನರಿಗೆ ಎಚ್ಚರಿಕೆ:ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ
ಆಗುತ್ತಿರುವುದರಿಂದ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದೆ. ಜಲಾಶಯದಿಂದ ಹೆಚ್ಚಿನನೀರನ್ನು ಕಾವೇರಿ ನದಿಗೆ ಹರಿಸುವುದರಿಂದ ಅರಕಲಗೂಡು ತಾಲ್ಲೂಕಿನ ಕಾವೇರಿ ನದಿ ಪಾತ್ರದಜನರು ಎಚ್ಚರಿಕೆಯಿಂದಿರಲು ಕೋರಲಾಗಿದೆ.

ಯಗಚಿ ಜಲಾಶಯಭರ್ತಿಯಾಗಿದ್ದು,ನೀರನ್ನು ಹೊರ ಬಿಡಲಾಗುತ್ತಿದೆ. ಅಣೆಕಟ್ಟೆ ಕೆಳಭಾಗ ಹಾಗೂ ನದಿ ಪಾತ್ರದ ಪ್ರದೇಶದಲ್ಲಿರುವಜನರು, ಜಾನುವಾರು ಹಾಗೂ ಆಸಿ ಪಾಸ್ತಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಿಕೊಳ್ಳಬೇಕು ಎಂದು ಯಗಚಿ ಯೋಜನಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT