ಸೋಮವಾರ, ಜನವರಿ 17, 2022
20 °C

ಪರಿಸ್ಥಿತಿ ನೋಡಿ ಲಾಕ್‍ಡೌನ್: ಸಚಿವ ಕೆ.ಗೋಪಾಲಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಜಿಲ್ಲೆ ಹಾಗೂ ರಾಜ್ಯದಲ್ಲಿ ಪರಿಸ್ಥಿತಿ ನೋಡಿಕೊಂಡು ಲಾಕ್‍ಡೌನ್ ಮಾಡುವ ಬಗ್ಗೆ ಮುಖ್ಯಮಂತ್ರಿ ತೀರ್ಮಾನ ಮಾಡಲಿದ್ದಾರೆ ಎಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಜಿಲ್ಲೆಯಲ್ಲಿ 15-18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇನ್ನೊಂದು ವಾರ ಕಳೆಯಬೇಕು. ಆಮೇಲೆ ಸಂದರ್ಭ, ಸನ್ನಿವೇಶ ನೋಡಿಕೊಂಡು ಮುಖ್ಯಮಂತ್ರಿ ಲಾಕ್‍ಡೌನ್ ಬಗ್ಗೆ ತೀರ್ಮಾನ ಮಾಡುತ್ತಾರೆ.  ರಾಜಧಾನಿಯಲ್ಲಿ ಕೊರೊನಾ ಪ್ರಕರಣ ಜಾಸ್ತಿಯಾಗುತ್ತಿವೆ. ಬೆಂಗಳೂರಿಗೆ ವಿಶೇಷ ಒತ್ತು ಕೊಟ್ಟು ಕಂಟೇನ್‌ಮೆಂಟ್ ವಲಯ ಗುರುತಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಈಗ ಕಡಿಮೆಯಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಪ್ರತಿ ತಾಲ್ಲೂಕಿನಲ್ಲಿ ಒಂದೊಂದು ಹಾಸ್ಟೆಲ್‍ ತೆರೆಯಲಾಗಿದೆ. ಯಾರಿಗೆ  ಸೋಂಕು ತಗುಲಿದರೂ ಅವರನ್ನು ಹಾಸ್ಟೆಲ್‍ಗೆ ಕರೆದುಕೊಂಡು ಬಂದು ಚಿಕಿತ್ಸೆ
ನೀಡಲಾಗುವುದು ಎಂದರು.

ಈಗಾಗಲೇ ಔಷಧಿ, ಆಮ್ಲಜನಕ, ವೆಂಟಿಲೇಟರ್, ಬೆಡ್ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಘಟಕ ಕಡ್ಡಾಯವಾಗಿ ಇರಲೇಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದೇನೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.