ಅರಕಲಗೂಡು: ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿಯನ್ನು 4 ವರ್ಷಗಳ ನಂತರ ಮತ್ತೆ ಒಂದುಗೂಡಿಸಿದ ಪ್ರಕರಣ ಪಟ್ಟಣದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಬಿ.ಕೆ. ನಾಗೇಶ್ ಮೂರ್ತಿಯವರ ಸಮ್ಮುಖದಲ್ಲಿ ನಡೆಯಿತು.

ತಾಲ್ಲೂಕಿನ ಸರಗೂರು ಗ್ರಾಮದ ನರಸಿಂಹಮೂರ್ತಿ ಮತ್ತು ವಿಜಯಕುಮಾರಿ, ಕುಟುಂಬ ಕಲಹದಿಂದ 2020 ರಲ್ಲಿ ವಿಚ್ಛೇದನ ಕೋರಿ ಸಲ್ಲಿಸಿದ್ದರು. ಶನಿವಾರ ನಡೆದ ಜನತಾ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಾಧೀಶ ನಾಗೇಶ್‌ಮೂರ್ತಿ, ದಂಪತಿ ಹಾಗೂ ಅವರ ಸಂಬಂಧಿಕರು ಮತ್ತು ವಕೀಲರೊಂದಿಗೆ ಸಮಾಲೋಚಿಸಿ ಸಂಧಾನ ನಡೆಸಿದರು.

ದಂಪತಿಗಳು ವಿಚ್ಛೇದನಕ್ಕೆ ನೀಡಿದ ಅರ್ಜಿ ಹಿಂಪಡೆದು ಒಬ್ಬರಿಗೊಬ್ಬರು ಅರ್ಥ ಮಾಡಿಕೊಂಡು ಜೀವನ ಸಾಗಿಸುವುದಾಗಿ ಒಪ್ಪಿದ ಕಾರಣ ನ್ಯಾಯಮೂರ್ತಿಗಳು ನ್ಯಾಯಾಲಯದ ಕೊಠಡಿಯಲ್ಲೇ ದಂಪತಿ ಹಾರ ಬದಲಾಯಿಸಿಕೊಳ್ಳುವ ಮೂಲಕ ಒಂದುಗೂಡಿಸಿದರು. ಇಂತಹ ಘಟನೆ ಇಲ್ಲಿನ ನ್ಯಾಯಾಲಯದಲ್ಲಿ ಇದೇ ಮೊದಲ ಬಾರಿಗೆ ನಡೆದಿರುವುದು ಹರ್ಷದಾಯಕ ಎಂದು ವಕೀಲರು ಹರ್ಷ ವ್ಯಕ್ತಪಡಿಸಿದರು.

ನ್ಯಾಯಾಧೀಶ ನಾಗೇಶಮೂರ್ತಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹಗಳು ಹೆಚ್ಚಾಗುತ್ತಿದ್ದು, ವಿಚ್ಛೇದನ ಪಡೆಯುವ ಸಂಖ್ಯೆಯೂ ಅಧಿಕವಾಗುತ್ತಿರುವುದು ಬೇಸರದ ಸಂಗತಿ. ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಬೇಕಾದರೆ ಶಾಂತಿ ಸುವ್ಯವಸ್ಥೆ ಅತ್ಯವಶ್ಯಕ ಎಂದರು.

ಸಣ್ಣ ಪುಟ್ಟ ವ್ಯಾಜ್ಯಗಳಿಂದ ಮನಸ್ಸುಗಳನ್ನು ಕೆಡಿಸಿಕೊಳ್ಳುವ ಬದಲು ಎಲ್ಲರೂ ಹೊಂದಾಣಿಕೆಯ ಜೀವನ ನಡೆಸಿದರೆ ಇಂತಹ ಘಟನೆಗಳು ನಡೆಯುವುದಿಲ್ಲ. ವಿಚ್ಛೇದನಕ್ಕೆ ಮುಂದಾಗಿರುವ ದಂಪತಿಗೆ ಈ ಪ್ರಕರಣ ಒಂದು ಮಾರ್ಗದರ್ಶನವಾಗಿದೆ ಎಂದು ತಿಳಿಸಿದರು.

ಹಿರಿಯ ವಕೀಲರಾದ ಎಚ್.ಎಸ್. ರೇವಣ್ಣ, ಶಂಕರಯ್ಯ, ಬಿರೇಶ್, ಮಧುಸೂದನ್, ಜಯಕೃಷ್ಣ ಹಾಗೂ ಎಚ್.ಜೆ. ಪ್ರಕಾಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.