ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೇಯಸ್ ಪಟೇಲ್‍ ಆಯ್ಕೆ ಸ್ವಾಗತಾರ್ಹ: ಶಿವಲಿಂಗೇಗೌಡ

Published 9 ಮಾರ್ಚ್ 2024, 14:43 IST
Last Updated 9 ಮಾರ್ಚ್ 2024, 14:43 IST
ಅಕ್ಷರ ಗಾತ್ರ

ಅರಸೀಕೆರೆ: ಹಾಸನ ಲೋಕಸಭೆ ಕ್ಷೇತ್ರ ಅಭ್ಯರ್ಥಿಯಾಗಿ ಶ್ರೇಯಸ್ ಪಟೇಲ್ ಅವರನ್ನು ಆಯ್ಕೆ ಮಾಡಿರುವುದು ಸ್ವಾಗತಾರ್ಹ. ಪಕ್ಷದ ಗೆಲುವಿಗೆ ಕಾರ್ಯಕರ್ತರು, ಮುಖಂಡರು ಶ್ರಮಿಸಲಿದ್ದಾರೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.

ಲೋಕಸಭೆಯ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶ್ರೇಯಸ್ ಪಟೇಲ್‍ರವರನ್ನು ಆಯ್ಕೆ ಮಾಡಿರುವುದು ಸಂತಸ ಹಾಗೂ ಸ್ವಾಗರ್ತಹವಾಗಿದ್ದು ಪಕ್ಷದ ಗೆಲುವಿಗೆ ನಾವೂ ಹಾಗೂ ಕಾರ್ಯಕರ್ತರು ಅವಿರತ ಶ್ರಮವಹಿಸಿ ಗೆಲ್ಲುವನ್ನು ಸಾಧಿಸಲಿದ್ದೇವೆ ಎಂದು ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಶಾಸಕ ಕೆ ಎಂ ಶಿವಲಿಂಗೇಗೌಡ ಹೇಳಿದರು.

ಪಕ್ಷದ ಕಚೇರಿಯಲ್ಲಿ ಶಾಸಕರು ಸುದ್ದಿಗಾರರೊಂದಿಗೆ ಮಾತನಾಡಿ ಜಿಲ್ಲೆಯಿಂದ ಶ್ರೇಯಸ್ ಪಟೇಲ್‍ರವರನ್ನು ಸಂಸದರ ಸ್ಥಾನಕ್ಕೆ ಆಯ್ಕೆ ಮಾಡಿರುವ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರಿಗೆ ಧನ್ಯವಾದಗಳನ್ನು ತಿಳಿಸಿದರು.

ಜಿಲ್ಲೆಯಲ್ಲಿ ಪ್ರಚಾರ ಕಾರ್ಯ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಜಿಲ್ಲೆಯಾಂದ್ಯಂತ ಪ್ರವಾಸ ಮಾಡಲಿದ್ದು ನಾವೂ ಕೂಡ ಕಳೆದ ವಿಧಾನ ಸಭೆಯ ಚುನಾವಣೆ ರೀತಿ ಹೋರಾಟ ಮಾಡಿ ಕಾಂಗ್ರೆಸ್ ಪಕ್ಷವನ್ನು ಗೆದ್ದೇ ಗೆಲ್ಲುಸುತ್ತೆವೆ ಎಂದು ಭರವಸೆ ನೀಡಿದರು.


ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಿ ಬಡವರ, ದೀನ ದಲಿತರ,ಮಧ್ಯಮ ವರ್ಗದವರ ಹಿತಾಸಕ್ತಿಯನ್ನು ಸದಾ ಕಾಯುತ್ತ ಬಂದಿದ್ದು ಲೋಕಸಭೆ ಚುನಾವಣೆಯಲ್ಲಿ ಜನರು ಪಕ್ಷಕ್ಕೆ ಆಶೀರ್ವಾದ ಮಾಡಿ ಗೆಲ್ಲಿಸಿದ್ದರೆ ಜಿಲ್ಲೆಯಲ್ಲಿ ಮತ್ತಷ್ಟು ಪ್ರಗತಿಪರ ಯೋಜನೆಗಳನ್ನು ಜಾರಿಗೆ ತರಬಹುದು ಆದ್ದರಿಂದ ಜಿಲ್ಲೆಯ ಸಮಸ್ತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರು ಕ್ಷೇತ್ರದಾದ್ಯಂತ ಸಂಚರಿಸಿ ಅಭ್ಯರ್ಥಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವು ಒಗ್ಗಟ್ಟಿನಿಂದ ಇದ್ದು ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳನ್ನು ಮತ್ತಷ್ಟು ಬಿರುಸುಗೊಳ್ಳಲು ಈ ಚುನಾವಣೆ ಮಹತ್ವದ್ದಾಗಿದ್ದು ರಾಜ್ಯ ನಾಯಕರು ಸಿದ್ದರಾಮಯ್ಯ ಹಾಗೂ ಶಿವಕುಮಾರ್‍ರವರು ಈಗಾಗಲೇ ಹಲವು ಬಾರಿ ಜಿಲ್ಲೆಯಾದ್ಯಂತ ಸಭೆ ಸಮಾರಂಭಗಳಲ್ಲಿ ಪಾಲ್ಗೊಂಡು ಲೋಕಸಭೆಯ ಚುನಾವಣೆಯ ಪ್ರಚಾರವನ್ನು ಆರಂಭಿಸಿದ್ದು ಮುಂದೆಯೂ ಕೂಡ ಜಿಲ್ಲೆಗೆ ಆಗಮಿಸಲಿದ್ದು ಶ್ರೇಯಸ್ ಪಟೇಲ್‍ರ ಗೆಲುವು ನಿಶ್ಚಿತ ಎಂದು ಕೆ ಎಂ ಶಿವಲಿಂಗೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT