ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ಲೋಕಸಭೆ ಚುನಾವಣೆ: ದೇವೇಗೌಡರ ನೇತೃತ್ವದಲ್ಲಿ ಡಿ.1ರಂದು ಸಭೆ

Published 29 ನವೆಂಬರ್ 2023, 14:42 IST
Last Updated 29 ನವೆಂಬರ್ 2023, 14:42 IST
ಅಕ್ಷರ ಗಾತ್ರ

ಹಾಸನ: ಲೋಕಸಭೆ ಚುನಾವಣೆಯ ಅಭ್ಯರ್ಥಿ ಆಯ್ಕೆ ಮತ್ತು ಪಕ್ಷದ ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡರು ಡಿ.1 ರಂದು ಹೊಳೆನರಸೀಪುರ ತಾಲ್ಲೂಕಿನ ಕಟ್ಟೆಬೆಳಗುಲಿ ಶ್ರೀರಾಮದೇವರ ಕಟ್ಟೆಯಲ್ಲಿ ಸಭೆ ಕರೆದಿದ್ದಾರೆ.

ಈ ಸಂಬಂಧ, ಜಿಲ್ಲೆಯ ಸಂಸದರು, ಹಾಲಿ, ಮಾಜಿ ಶಾಸಕರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಲಿ, ಮಾಜಿ ಸದಸ್ಯರಿಗೆ ಪತ್ರ ಬರೆದಿದ್ದಾರೆ.

‘ಡಿಸೆಂಬರ್‌ ಅಂತ್ಯದೊಳಗೆ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಚರ್ಚೆ ನಡೆಯಲಿದೆ. ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೂ ಪಕ್ಷವನ್ನು ಸಂಘಟಿಸುವ ಕುರಿತು ದೇವೇಗೌಡರು ಸಲಹೆ, ಸೂಚನೆ ನೀಡಲಿದ್ದಾರೆ. ಜೆಡಿಎಸ್–ಬಿಜೆಪಿ ಮೈತ್ರಿ ಕುರಿತು ಮನವರಿಕೆ ಮಾಡಿಕೊಡುವ ಉದ್ದೇಶವೂ ಇದೆ’ ಎಂದು ಪಕ್ಷದ ಮೂಲಗಳು ತಿಳಿಸಿವೆ.

‘ಜಿಲ್ಲೆಯಲ್ಲಿ ಪಕ್ಷದ ಹಿಡಿತ ಸಡಿಲವಾಗುತ್ತಿದ್ದು, ಲೋಕಸಭೆ ಚುನಾವಣೆಗೂ ಮುನ್ನ ಪಕ್ಷವನ್ನು ಬಲಪಡಿಸಲು ಸಭೆ ಕರೆದಿದ್ದಾರೆ’ ಎಂಬ ‌ಮಾಹಿತಿ ಲಭ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT