ಲೋಕಸಭೆಗೆ ಸ್ಪರ್ಧೆ: ಗೌಡರು ಚರ್ಚಿಸಿಲ್ಲ

7
ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ

ಲೋಕಸಭೆಗೆ ಸ್ಪರ್ಧೆ: ಗೌಡರು ಚರ್ಚಿಸಿಲ್ಲ

Published:
Updated:

ಹಾಸನ: ‘ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಚಾರ ಮಾಧ್ಯಮದಿಂದ ಗೊತ್ತಾಗಿದೆ. ಈವರೆಗೆ ದೇವೇಗೌಡರು ನನ್ನ ಜತೆ ಮಾತುಕತೆ ನಡೆಸಿಲ್ಲ’ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಹೇಳಿದರು.

ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕಾರ್ಯಕರ್ತರ ಅಭಿಲಾಷೆ ಇದ್ದರೆ ಸ್ಪರ್ಧಿಸಲು ಸಿದ್ದ. ರಾಜ್ಯದ ಯಾವ ಜಿಲ್ಲೆಯಲ್ಲಿ ಟಿಕೆಟ್ ಕೊಟ್ಟರು ಪಕ್ಷದ ಅಣತಿಯಂತೆ ಕಾರ್ಯನಿರ್ವಹಿಸುವೆ. ಹಾಸನದಲ್ಲಿ ಸ್ಪರ್ಧೆ ಮಾಡಬೇಕೆಂಬ ತೀರ್ಮಾನವನ್ನು ಕಾರ್ಯಕರ್ತರು ತೆಗೆದುಕೊಳ್ಳುತ್ತಾರೆ. ಅವರೊಂದಿಗೆ ಸಭೆ ನಡೆಸಿದ ಬಳಿಕ ಸ್ಪರ್ಧೆ ವಿಚಾರದ ಬಗ್ಗೆ ಮಾತನಾಡುವೆ’ ಎಂದು ಮಾಹಿತಿ ನೀಡಿದರು.

‘ಹುಟ್ಟೂರಿನಲ್ಲಿ ಸ್ಪರ್ಧೆ ಮಾಡಿ ಜನರ ಕಷ್ಟಗಳಿಗೆ ಸ್ಪಂದಿಸಬೇಕೆಂಬ ಬಯಕೆ ಇದೆ. ಕಾರ್ಯಕರ್ತರು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚರ್ಚಿಸಲಾಗುವುದು. ಮುಂದಿನ ದಿನದಲ್ಲಿ ಕಾಲವೇ ನಿರ್ಣಯಿಸಲಿದೆ’ ಎಂದು ನುಡಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !