ಭಾನುವಾರ, ಮೇ 9, 2021
33 °C
ಫೆ. 7ರ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ

ಎಸ್ಟಿ ಮೀಸಲಾತಿಯಿಂದ ಸಾಕಷ್ಟು ಲಾಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಫೆ.7ರಂದು ಬೆಂಗಳೂರಿನಲ್ಲಿ ನಡೆಯುವ ಸಮಾವೇಶಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಹೋರಾಟಕ್ಕೆ ಬಂಬಲ ನೀಡಬೇಕು ಎಂದು ಕುರುಬ ಎಸ್ಟಿ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ವಿರೂಪಾಕ್ಷಪ್ಪ ಹೇಳಿದರು.

ನಗರದ ಕನಕ ಭವನದಲ್ಲಿ ಕರ್ನಾಟಕ ಪ್ರದೇಶ ಕುರುಬ ಸಂಘದ ಆಶ್ರಯದಲ್ಲಿ ಶುಕ್ರವಾರ ಕರೆದಿದ್ದ ಕುರುಬ ಎಸ್ಟಿ ಮೀಸಲಿಗಾಗಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಸ್ವಾತಂತ್ರ‍್ಯ ಬಂದ ನಂತರ ಕುರುಬ ಸಮುದಾಯಕ್ಕೆ ಸೌಲಭ್ಯಗಳೇ ಸಿಕ್ಕಿಲ್ಲ. ಆ ಕಾರಣದಿಂದಲೇ ಈ ಹೋರಾಟ ಆರಂಭಿಸಲಾಗಿದೆ. ಕಾಡುಕುರುಬ, ಜೇನು ಕುರುಬ, ಗೋಂಡಾ ಈ ಎಲ್ಲವೂ ಎಸ್ಟಿಗೆ ಸೇರ್ಪಡೆಯಾಗಿದೆ. ಆದರೆ, ಕುರುಬ ಸಮುದಾಯವನ್ನು ಸೇರಿಸಿಲ್ಲ. ಹೋರಾಟ ಯಾವುದೇ ಪಕ್ಷ ಅಥವಾ ವ್ಯಕ್ತಿಯ ಪರ–ವಿರೋಧ ಅಲ್ಲ ಎಂದು ಸ್ಪಷ್ಟಪಡಿಸಿದರು.

ಕುರುಬ ಸಮುದಾಯ ಈಗಾಗಲೇ 2 ಎ ವರ್ಗಕ್ಕೆ ಸೇರಿದೆ. ಇದರಲ್ಲಿ ಶೇಕಡಾ 15 ರಷ್ಟು ಮೀಸಲಾತಿ ಇದ್ದು, 150 ಜಾತಿಗಳು ಸೇರಿವೆ. ಶೈಕ್ಷಣಿಕ, ರಾಜಕೀಯ ಕ್ಷೇತ್ರದಲ್ಲಿ ಮೀಸಲಾತಿ ಇಲ್ಲ. ಎಸ್ಟಿಗೆ ಸೇರ್ಪಡೆಯಾದರೆ ಶೈಕ್ಷಣಿಕ ಕ್ಷೇತ್ರದಲ್ಲಿ ಅವಕಾಶ ಸಿಗಲಿದೆ. ರಾಜ್ಯದಲ್ಲಿ ಕನಿಷ್ಟ 15ರಿಂದ 20 ಮಂದಿ ಶಾಸಕರಾಗುವ ಅವಕಾಶವಿದೆ. ಜೊತೆಗೆ ಉದ್ಯೋಗ ಕ್ಷೇತ್ರದಲ್ಲಿಯೂ ಅನುಕೂಲ ಆಗಲಿದೆ ಎಂದು ಮಾಹಿತಿ ನೀಡಿದರು.

ಹೋರಾಟ ಫೆ. 7ಕ್ಕೆ ಕೊನೆಗೊಳ್ಳುವುದಿಲ್ಲ. ಕಾಗಿನೆಲೆ ಕನಕ ಗುರು ಪೀಠದ ನಿರಂಜನಾಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಬೇಡಿಕೆ ಈಡೆರುವವರೆಗೂ ಮುಂದುವರೆಯಲಿದೆ ಎಂದು ತಿಳಿಸಿದರು.

ಮಾಜಿ ಸಚಿವ ಎಚ್‌.ಎಂ ರೇವಣ್ಣ, ಕೆ.ಎಸ್‌. ಈಶ್ವರಪ್ಪ ಅವರ ಪುತ್ರ ಕಾಂತೇಶ್‌, ಕುರುಬ ಎಸ್ಟಿ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ದೊಡ್ಡಯ್ಯ, ಉಪಾಧ್ಯಕ್ಷ ಪುಟ್ಟಸ್ವಾಮಿ, ಕಾರ್ಯಾಧ್ಯಕ್ಷ ಕುರುಬರ ಮುಕಡಪ್ಪ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು