ಭಾನುವಾರ, ಸೆಪ್ಟೆಂಬರ್ 26, 2021
21 °C
ಹೊಯ್ಸಳ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆದ ದೇವೇಗೌಡರ ಕುಟುಂಬ

ಮಾಧ್ಯಮಗಳ ವಿರುದ್ಧ ಸಿಎಂ ಕುಮಾರಸ್ವಾಮಿ ಮುನಿಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಮುನಿಸು ಮುಂದುವರಿಸಿದ್ದಾರೆ.

ಚಿಕ್ಕಮಗಳೂರಿನ ಉಮಾ ಮಹೇಶ್ವರಿ ದೇವಾಲಯದಲ್ಲಿ ಕುಟುಂಬ ಸಮೇತರಾಗಿ ಅಮಾವಾಸ್ಯೆ ಪೂಜೆ ಸಲ್ಲಿಸಿದ ಬಳಿಕ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಶನಿವಾರ ಸಂಜೆ ಹಾಸನ ಹೊರ ವಲಯದಲ್ಲಿರುವ ಹೊಯ್ಸಳ ರೆಸಾರ್ಟ್ ಗೆ ಭೇಟಿ ನೀಡಿದ್ದರು.

ತಂದೆ, ಸಂಸದ ಎಚ್.ಡಿ.ದೇವೇಗೌಡರು, ತಾಯಿ ಚೆನ್ನಮ್ಮ, ಸೋದರ ಸಚಿವ ರೇವಣ್ಣ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗಿದ್ದರು. 

ಸುಮಾರು ಅರ್ಧ ಗಂಟೆಗೂ ಹೆಚ್ಚು ಹೋಟೆಲ್ ನಲ್ಲಿ ಇದ್ದು ಚಹಾ ಕುಡಿದು ಲಘು ವಿಶ್ರಾಂತಿ ಪಡೆದ ಕುಮಾರಸ್ವಾಮಿ, ನಂತರ ಕುಟುಂಬ ಸಮೇತರಾಗಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಲು ಅವರು ನಿರಾಕರಿಸಿದರು. ಇದರಿಂದಾಗಿ ಕೆಲ ದಿನಗಳಿಂದ ‘ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ’ ಎನ್ನುವ ಮುನಿಸನ್ನು ಕುಮಾರಸ್ವಾಮಿ ಮುಂದುವರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು