ಮಂಗಳವಾರ, ಮೇ 18, 2021
23 °C
₹30 ಲಕ್ಷ ವೆಚ್ಚದ ಕಾಮಗಾರಿಗೆ ಎಚ್.ಕೆ. ಕುಮಾರಸ್ವಾಮಿ ಚಾಲನೆ

ಮಗಜಹಳ್ಳಿ ಫಾಲ್ಸ್‌ ಅಭಿವೃದ್ಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಕಲೇಶಪುರ: ತಾಲ್ಲೂಕಿನ ಅಚ್ಚನಹಳ್ಳಿ- ಮಗಜಹಳ್ಳಿ ಜಲಪಾತದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಕೆ. ಕುಮಾರಸ್ವಾಮಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘₹30 ಲಕ್ಷ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಅತಿವೃಷ್ಟಿ ಹಾಗೂ ಅನಾವೃಷ್ಟಿ, ಬೆಲೆ ಕುಸಿತದಂತಹ ಸಮಸ್ಯೆಗಳಿಂದ ತಾಲ್ಲೂಕಿನ ರೈತರು ಸಂಕಷ್ಟದಲ್ಲಿದ್ದಾರೆ. ಇಲ್ಲಿಯ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಪ್ರವಾಸೋದ್ಯಮ ಅಭಿವೃದ್ಧಿ ಬಿಟ್ಟರೆ ಯಾವುದೇ ಮಾರ್ಗವಿಲ್ಲ. ಪ್ರವಾಸಿ ತಾಣಗಳಲ್ಲಿ ಮೂಲ ಸೌಲಭ್ಯ ಒದಗಿಸಬೇಕಿದೆ. ತಾಲ್ಲೂಕಿನ ಪ್ರವಾಸಿ ತಾಣಗಳ ಅಭಿವೃದ್ಧಿ ಸಂಬಂಧ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರೊಂದಿಗೆ ಈಗಾಗಲೇ ಚರ್ಚೆ ನಡೆಸಲಾಗಿದೆ’ ಎಂದರು.

ಮಲೆನಾಡಿನ ನೈಸರ್ಗಿಕ ಸೌಂದರ್ಯವನ್ನು ಕಣ್ತುಂಬಿಕೊಂಡು ಮನೋಲ್ಲಾಸಕ್ಕಾಗಿ ಪ್ರತಿ ವಾರ 5 ಸಾವಿರಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಬಂದು ಹೋಗುತ್ತಿದ್ದಾರೆ. ತಾಲ್ಲೂಕಿನಲ್ಲಿರುವ ಸ್ಮಾರಕಗಳು, ಬೆಟ್ಟ, ಗುಡ್ಡ, ಝರಿ, ಜಲಪಾತಗಳನ್ನು ನೋಡುವುದಕ್ಕಾಗಿ ಗೋಪುಗಳನ್ನು ನಿರ್ಮಿಸುವ ಉದ್ದೇಶವಿದೆ ಎಂದು ತಿಳಿಸಿದರು.

ಮಂಜ್ರಾಬಾದ್‌ ಕೋಟೆ ಅಭಿವೃದ್ಧಿಗೆ ₹3 ಕೋಟಿ, ದೇವಾಲದಕೆರೆ ಬಳಿ ಬಿಳಿಸಾರೆ ಪಾಲ್ಸ್ ಅಭಿವೃದ್ಧಿಗೆ ₹75 ಲಕ್ಷ, ಬೆಟ್ಟದ ಬೈರವೇಶ್ವರ ದೇವಸ್ಥಾನ ರಸ್ತೆ ಮತ್ತು ವೀಕ್ಷಣಾ ಗೋಪುರ ಅಭಿವೃದ್ಧಿಗೆ ₹1.50 ಕೋಟಿ, ಅತ್ತಿಹಳ್ಳಿ ಸಮೀಪದ ಮೂಕನಮನೆ ಫಾಲ್ಸ್ ಅಭಿವೃದ್ಧಿಗೆ ₹30 ಲಕ್ಷ ಬಿಡುಗಡೆಯಾಗಿದೆ ಎಂದು ಹೇಳಿದರು. ಹಾನುಬಾಳು ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಎಂ.ಬಿ.ರಾಜೀವ್‌, ಜಿ.ಪಂ. ಮಾಜಿ ಸದಸ್ಯ ಕೆ.ಎಸ್‌. ಕುಮಾರಸ್ವಾಮಿ, ಗ್ರಾಮದ ಮುಖಂಡರಾದ ಎ.ಕೆ.ಸಚ್ಚಿದೇವ್‌, ಅ.ಸಿ. ಮೋಹನ್‌ ಹಾಗೂ ಇತರರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.