ಶನಿವಾರ, ಸೆಪ್ಟೆಂಬರ್ 26, 2020
23 °C
ಆಟೊ–ಕೆಎಸ್ಆರ್‌ಟಿಸಿ ಬಸ್‌ ಡಿಕ್ಕಿ

ಮಗು ಸೇರಿ ಮೂವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಆಟೊ ಮತ್ತು ಕೆಎಸ್‌ಆರ್‌ಟಿಸಿ ನಡುವೆ ಡಿಕ್ಕಿ ಸಂಭವಿಸಿ ಮೂರು ತಿಂಗಳ ಮಗು ಸೇರಿ ಮೂವರು ಮೃತಪಟ್ಟಿರುವ ಘಟನೆ ಬೇಲೂರು ತಾಲ್ಲೂಕಿನ ಹಗರೆ ಬಳಿ ನಡೆದಿದೆ.

ಹಗರೆ ಸಮೀಪದ‌ ರಂಗನಕೊಪ್ಪಲು ನಿವಾಸಿಗಳಾದ ಲಕ್ಷ್ಮಮ್ಮ(51), ಚಂದ್ರಕಲಾ (31) ಹಾಗೂ ಮೂರು ತಿಂಗಳ ಹೆಣ್ಣು ಮಗು ಮೃತಪಟ್ಟಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರಿನಿಂದ‌ ಚಿಕ್ಕಮಗಳೂರಿಗೆ ತೆರಳುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಬಸ್ ಹಗರೆ ಆಸ್ಪತ್ರೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಆಟೊಗೆ ಡಿಕ್ಕಿ ಹೊಡೆದಾಗ ಈ ಅವಘಡ ಸಂಭವಿಸಿದೆ. ಆಟೊ ಸಂಪೂರ್ಣ ಜಖಂಗೊಂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.