ಅರಕಲಗೂಡು: ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ, ಕಾಂಗ್ರೆಸ್ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಪ್ರಯುಕ್ತ ಬುಧವಾರ ಕಾಂಗ್ರೆಸ್ ಪಕ್ಷ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ನಡಿಗೆಯಲ್ಲಿ ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು.
ಖಾದಿ ವಸ್ತ್ರ, ಟೋಪಿ ಧರಿಸಿದ ಮುಖಂಡರು , ಕಾರ್ಯಕರ್ತರು ಬನ್ನಿ ಮಂಟಪದಿಂದ ಹೊರಟು ಅನಕೃ ವೃತ್ತದವರೆಗೆ ಪಾದಯಾತ್ರೆ ನಡೆಸಿದರು. ಅನಕೃ ವೃತ್ತದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ. ಶಾಹಿದ್ ಟೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಎಸ್. ಪ್ರಸನ್ನ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಪಿ.ಶ್ರೀಧರ್ ಗೌಡ, ಮುಖಂಡ ಎಂ.ಟಿ.ಕೃಷ್ಣೇಗೌಡ ಮಾತನಾಡಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಸ್. ಎಸ್. ಪ್ರದೀಪ್ ಕುಮಾರ್, ಉಪಾಧ್ಯಕ್ಷ ಸುಭಾನ್ ಷರೀಫ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗುರುಮೂರ್ತಿ, ಐಎನ್ ಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್, ಐಎನ್‌ಟಿಯುಸಿ ತಾಲ್ಲೂಕು ಅಧ್ಯಕ್ಷ ರಂಗನಾಥ್, ಎನ್‌ಎಸ್‌ಯುಐ ತಾಲ್ಲೂಕು ಅಧ್ಯಕ್ಷ ಶ್ರೀಕಾಂತ್, ಮುಖಂಡರಾದ ದಿವಾಕರ್ ಗೌಡ, ಎಸ್ ಎಲ್ ಗಣಪತಿ, ದಶರಥ, ,ಪುಟ್ಟಯ್ಯ, ಮುಸಾವೀರ್, ವಿಜಿಕುಮಾರ್, ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ರಾಧ , ಸುಮ,ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಸೋಮಶೇಖರ್ ಕಬ್ಬಳಿಗೆರೆ, ಸತ್ಯರಾಜ್,ಧರ್ಮ, ಸಲೀಂ ರಾಜೇಶ್ , ಕೆಡಿಪಿ ಸದಸ್ಯ ಸುರೇಶ್ ಸೋಮನಹಳ್ಳಿ, ಎಸ್‌ಸಿ ಎಸ್‌ಟಿ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಪಟ್ಟಣ ಮಂಜು ಉಪಸ್ಥಿತರಿದ್ದರು.