ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹ ಸಚಿವರ ಬೆಂಗಾವಲು ವಾಹನ ಡಿಕ್ಕಿ: ವ್ಯಕ್ತಿ ಸಾವು

Last Updated 2 ಮಾರ್ಚ್ 2023, 2:28 IST
ಅಕ್ಷರ ಗಾತ್ರ

ಹಾಸನ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಬುಧವಾರ ರಾತ್ರಿ ಸಚಿವ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಗಂಡಸಿ ಬಳಿ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಬೆಂಗಾವಲು ವಾಹನ ಡಿಕ್ಕಿ ಹೊಡೆದಿದೆ. ಗಂಭೀರವಾರ ಗಾಯಗೊಂಡಿದ್ದ ರಮೇಶ್‌ (45) ಅವರನ್ನು ಕೂಡಲೇ ಗಂಡಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಿಯೇ ರಮೇಶ್‌ ಮೃತಪಟ್ಟಿದ್ದರು ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಅಪಘಾತ ನಡೆದ ಸಂದರ್ಭದಲ್ಲಿ ಗೃಹ ಸಚಿವರು ಪ್ರಯಾಣಿಸುತ್ತಿದ್ದ ಕಾರು ಘಟನಾ ಸ್ಥಳದಿಂದ 300 ಮೀಟರ್‌ ದೂರದಲ್ಲಿತ್ತು. ಅಪಘಾತದ ಬಗ್ಗೆ ಸಚಿವರಿಗೆ ನಾವು ಮಾಹಿತಿ ನೀಡದೇ ಇರುವುದರಿಂದ, ತೀರ್ಥಹಳ್ಳಿ ತಲುಪುವವರೆಗೆ ಘಟನೆ ಬಗ್ಗೆ ಅವರಿಗೆ ತಿಳಿದಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮೃತ ವ್ಯಕ್ತಿಯ ಪತ್ನಿ ನೀಡಿದ ದೂರಿನಂತೆ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಕಾನೂನು ಪ್ರಕ್ರಿಯೆಗಳ ನಂತರ ಮೃತದೇಹವನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT