ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ಡಿಕ್ಕಿ: ಯುವಕ ಸಾವು

Published 19 ಫೆಬ್ರುವರಿ 2024, 16:12 IST
Last Updated 19 ಫೆಬ್ರುವರಿ 2024, 16:12 IST
ಅಕ್ಷರ ಗಾತ್ರ

ಸಕಲೇಶಪುರ: ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಯುವಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿರುವ ಘಟನೆ ಪಟ್ಟಣದ ಹೊಸ ಬಸ್ ನಿಲ್ದಾಣ ಸಮೀಪ ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಕೆಸಗಾನಹಳ್ಳಿ ಗ್ರಾಮದ ಯೋಗೇಶ್‌ (22) ಮೃತಪಟ್ಟವರು.

ಅಪಘಾತ ಮಾಡಿದ ಕಾರು ಪುರಸಭೆ ಮಾಜಿ ಅಧ್ಯಕ್ಷ ಸಂತೋಷ್‌ ಜೈನ್‌ ಅವರಿಗೆ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ.

ಅತಿ ವೇಗ ಹಾಗೂ ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದ ಕಾರೊಂದು ರಸ್ತೆ ಬದಿಯಲ್ಲಿ ಮೂರ್ತ ವಿಸರ್ಜನೆ ಮಾಡುತ್ತಿದ್ದ ಯುವಕನೊಬ್ಬನ ಮೇಲೆ ಹರಿದು ಆತ ಮೃತಪಟ್ಟ ಘಟನೆ ಪಟ್ಟಣದ ಹೊಸ ಬಸ್ಸು ನಿಲ್ದಾಣ ಸಮೀಪ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಕೆಸಗಾನಹಳ್ಳಿ ಗ್ರಾಮದ ಯೋಗೇಶ್‌ (22) ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಪುರಸಭೆ ಮಾಜಿ ಅಧ್ಯಕ್ಷ ಸಂತೋಷ್‌ ಜೈನ್‌ ಪುತ್ರ ಕಾರು ಚಾಲಾಯಿಸುತ್ತಿದ್ದ ಎನ್ನಲಾಗಿದೆ.

ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾರು ವಶಪಡಿಸಿಕೊಂಡಿದ್ದು, ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT