ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕಲೇಶಪುರ | ಪ್ರಖರ ಬಿಸಿಲು: ತೆಂಗಿನ ಮರದಲ್ಲೇ ಪ್ರಜ್ಞೆತಪ್ಪಿದ ವ್ಯಕ್ತಿ!

Published 7 ಏಪ್ರಿಲ್ 2024, 23:30 IST
Last Updated 7 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಸಕಲೇಶಪುರ (ಹಾಸನ ಜಿಲ್ಲೆ): ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಗರಿಗಳನ್ನು ಕತ್ತರಿಸಲು ತೆಂಗಿನ ಮರ ಏರಿದ್ದ ವ್ಯಕ್ತಿ ಪ್ರಖರ ಬಿಸಿಲಿನ ಕಾರಣದಿಂದಾಗಿ ಪ್ರಜ್ಞೆ ತಪ್ಪಿ ಅಲ್ಲೇ ಸಿಲುಕಿ ನೇತಾಡುತ್ತಿದ್ದ ಘಟನೆ ಭಾನುವಾರ ನಡೆದಿದೆ.

ಸುಮಾರು 50 ಅಡಿ ಎತ್ತರದ ಮರದ ಮೇಲೆ ನೇತಾಡುತ್ತಿದ್ದ ಆ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಕೆಳಗಿಳಿಸಿ ಪ್ರಾಣಾಪಾಯದಿಂದ ಪಾರು ಮಾಡಿದರು.

ಕೊಲ್ಲಹಳ್ಳಿ ಗ್ರಾಮದ ನಿವಾಸಿ ನವೀನ್‌ ಸಾವಿನ ದವಡೆಯಿಂದ ಪಾರಾಗಿ ಬಂದವರು. ಮಂಜು ಎನ್ನುವವರಿಗೆ ಸೇರಿದ ಮರ ಏರಿ ಗರಿಗಳನ್ನು ಕತ್ತರಿಸಿ ಕೆಳಕ್ಕಿಳಿಯುವ ವೇಳೆ ಅವರಿಗೆ ಬಿಸಿಲಿನ ತಾಪದಿಂದ ಸುಸ್ತಾಗಿದೆ. ಪ್ರಜ್ಞಾಹೀನರಾಗಿದ್ದ ಅವರು, ಮರದಲ್ಲಿ ಕತ್ತರಿಸಿದ್ದ ಗರಿಗಳ ನಡುವೆ ಸಿಕ್ಕಿಹಾಕಿಕೊಂಡಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

ಅಗ್ನಿಶಾಮಕ ಠಾಣಾಧಿಕಾರಿ ಪ್ರತೀಕ್‌ ತಹಶೀಲ್ದಾರ್‌, ಸಹಾಯಕ ಠಾಣಾಧಿಕಾರಿ ರಾಜು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT