ಕಿಕ್ಕೇರಿ: ಗ್ರಾಮಗಳ ಸಂಪರ್ಕವಾಗಿ ಸೇತುವೆಗಳಿದ್ದು ಕಾಂಗ್ರೆಸ್ ಸರ್ಕಾರದಲ್ಲಿ ಅನುದಾನ ತರಲು ದೊಡ್ಡ ಹೋರಾಟ ಮಾಡುವ ಸ್ಥಿತಿ ಇದೆ ಎಂದು ಶಾಸಕ ಎಚ್.ಟಿ. ಮಂಜು ಹೇಳಿದರು.

ಹೋಬಳಿಯ ಮಾದಿಹಳ್ಳಿ ಹಳ್ಳದ ಸೇತುವೆ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ‘ನಾಲ್ಕು ವರ್ಷಗಳ ಹಿಂದೆ ಸುರಿದ ಕುಂಭದ್ರೋಣ ಮಳೆಯಿಂದ ಸೇತುವೆ ಕೊಚ್ಚಿಹೋಗಿ ಗ್ರಾಮಕ್ಕೆ ಸಂರ್ಪಕವೇ ಬಂದ್ ಆಗಿತ್ತು. ₹2.75ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಈ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಕಾವೇರಿ ನೀರಾವರಿ ನಿಗಮದ ಮೂಲಕ ನಡೆದಿದ್ದು ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಿ. ಈ ಭಾಗದ ಸಾರ್ವಜನಿಕರು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಸಬೇಕು’ ಎಂದರು.

ಕಾವೇರಿ ನೀರಾವರಿ ನಿಗಮದ ಹೇಮಾವತಿ ನೀರಾವರಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಜಯರಾಂ, ಎಇಇ ರಾಕೇಶ್, ಜೆಡಿಎಸ್ ಹೋಬಳಿ ಘಟಕದ ಅಧ್ಯಕ್ಷ ಕಾಯಿ ಮಂಜೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್, ತಾ.ಪಂ. ಮಾಜಿ ಸದಸ್ಯ ಕೃಷ್ಣೇಗೌಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶೇಖರ್, ಮುಖಂಡರಾದ ಕಳ್ಳನಕೆರೆ ಲಿಂಗರಾಜೇಗೌಡ, ಜೆಸಿಬಿ ನಾಗೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-40-908800499

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.