ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳೆನರಸೀಪುರ: ಮ್ಯಾನ್‌ಹೋಲ್‌ಗೆ ಇಳಿದು ಸ್ವಚ್ಛ ಮಾಡಿದ ಪೌರಕಾರ್ಮಿಕ, ಆಕ್ಷೇಪ

Last Updated 28 ನವೆಂಬರ್ 2021, 20:15 IST
ಅಕ್ಷರ ಗಾತ್ರ

ಹೊಳೆನರಸೀಪುರ: ಪಟ್ಟಣ ಪುರಸಭೆ ವ್ಯಾಪ್ತಿಯ ಆಶ್ರಯ ಬಡಾವಣೆಯಲ್ಲಿ ಶನಿವಾರ ಒಳಚರಂಡಿಯಮ್ಯಾನ್‌ಹೋಲ್‍ಗೆ ದಿನಗೂಲಿ ಪೌರಕಾರ್ಮಿಕರೊಬ್ಬರನ್ನು ಇಳಿಸಿ ಸ್ವಚ್ಛ ಮಾಡಿಸಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಮ್ಯಾನ್‌ಹೋಲ್‍ ಸ್ವಚ್ಛಗೊಳಿಸುತ್ತಿರುವ ಫೋಟೊವನ್ನು ವ್ಯಕ್ತಿಯೊಬ್ಬರು ತೆಗೆದಿದ್ದಾರೆ. ಶೌಚಗುಂಡಿಗೆ ಕಾರ್ಮಿಕರನ್ನು ಇಳಿಸಿರುವ ವಿಚಾರ ಗೊತ್ತಾಗುತ್ತಿದ್ದಂತೆ ಹಲವರು ಆಕ್ರೋಶ ಹೊರಹಾಕಿ, ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ಬಗ್ಗೆ ತಹಶೀಲ್ದಾರ್‌ ಕೆ.ಕೆ.ಕೃಷ್ಣಮೂರ್ತಿ ಪ್ರತಿಕ್ರಿಯಿಸಿ, ‘ಶೌಚಗುಂಡಿಗೆ ಇಳಿಸಿ ಕೆಲಸ ಮಾಡಿಸುವಂತಿಲ್ಲ. ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಿ, ಜಿಲ್ಲಾಧಿಕಾರಿಗೆ ವರದಿ ಸಲ್ಲಿಸುತ್ತೇವೆ. ಶೌಚಗುಂಡಿಗೆ ಇಳಿದ ದಿನಗೂಲಿ ಪೌರ ಕಾರ್ಮಿಕನ ಹಿತಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳುತ್ತೇವೆ’ ಎಂದರು.

ಪುರಸಭೆ ಅಧಿಕಾರಿಗಳು ಈಚೆಗೆ ವಿಮೆ ಮಾಡಿಸದ ವಾಹನವನ್ನು ರಸ್ತೆಗೆ ಇಳಿಸಿದ್ದರು. ಆ ವಾಹನ ಅಪಘಾತವಾಗಿ ವ್ಯಾನಿನಲ್ಲಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟು ಅವರಿಗೆ ಪರಿಹಾರ ದೊರಕುವ ಅವಕಾಶ ತಪ್ಪಿತ್ತು. ಈಗ ಪುರಸಭೆ ಅಧಿಕಾರಿಗಳು ಮತ್ತೊಂದು ಎಡವಟ್ಟು ಎಸಗಿ, ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT