ಬುಧವಾರ, ಏಪ್ರಿಲ್ 21, 2021
23 °C

ಹಾಸನ: ಮಾನವೀಯತೆ ಮೆರೆದ ಸಚಿವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆಳ್ಳೂರು ಕ್ರಾಸ್‌ ಸೇತುವೆ ಸಮೀಪ ಗುರುವಾರ ರಾತ್ರಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೆಂಗಳೂರಿನ ಶ್ರೀರಾಂಪುರ ನಿವಾಸಿ ಗಣೇಶ್‌ ಅವರನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮಾನವೀಯತೆ ಮೆರೆದಿದ್ದಾರೆ.

ಹಾಸನ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಸಚಿವರು ಕಾರಿನಲ್ಲಿ ಬರುತ್ತಿದ್ದಾಗ ಮಾರ್ಗ ಮಧ್ಯೆ ಸೇತುವೆ ಸಮೀಪ ಬೈಕ್ ಸವಾರ ಬಿದ್ದಿರುವುದು ನೋಡಿದರು. ತಕ್ಷಣ ತಮ್ಮ ಕಾರು ನಿಲ್ಲಿಸಿದ ಸಚಿವರು, ಆಂಬುಲೆನ್ಸ್ ಕರೆಸಿದರು. ಹತ್ತಿರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.