ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನರಾಯಪಟ್ಟಣ | ಮಾರಿಕಾಂಬ ಜಾತ್ರಾ ಮಹೋತ್ಸವ

Published 31 ಮಾರ್ಚ್ 2024, 15:25 IST
Last Updated 31 ಮಾರ್ಚ್ 2024, 15:25 IST
ಅಕ್ಷರ ಗಾತ್ರ

ಚನ್ನರಾಯಪಟ್ಟಣ: ಪ್ರತಿವರ್ಷದಂತೆ ಪಟ್ಟಣದ ಕೋಟೆ ಪ್ರದೇಶದಲ್ಲಿರುವ ಮಾರಿಕಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ದೇವಿಗೆ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಭಾನುವಾರ ಬೆಳಿಗ್ಗೆಯಿಂದಲೇ ಪೂಜೆಯ ಕೈಂಕರ್ಯಗಳು ಜರುಗಿದವು. ಭಕ್ತರು ಹಣ್ಣು, ಕಾಯಿ ಅರ್ಪಿಸಿ ದೇವರ ದರ್ಶನ ಪಡೆದರು. ನಂತರ ಪ್ರಸಾದ ವಿನಿಯೋಗಿಸಲಾಯಿತು. ಜಾತ್ರೆ ಪ್ರಯುಕ್ತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ರಕ್ತದೊತ್ತಡ, ಮಧುಮೇಹ, ಇಸಿಜಿ ಪರೀಕ್ಷೆ ಮತ್ತು ನೇತ್ರ ತಪಾಸಣೆ ನಡೆಸಲಾಯಿತು. ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.

ಸೋಮವಾರ ಸಂಜೆ ಮಂಗಳ ವಾದ್ಯದೊಂದಿಗೆ, ಡೊಳ್ಳುಕುಣಿತ, ಕೀಲುಕುದುರೆ, ಯಕ್ಷಗಾನ ಸೇರಿ ಅನೇಕ ಜಾನಪದ ಕಲಾತಂಡದೊಂದಿಗೆ ದೇವಿಯನ್ನು ಬೆಳ್ಳಿ ರಥದಲ್ಲಿ ಪ್ರತಿಷ್ಠಾಪಿಸಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT