ಗುರುವಾರ , ಅಕ್ಟೋಬರ್ 22, 2020
22 °C

ಹಾಸನ: ಗಾಂಜಾ ಗಿಡ ಬೆಳೆದಿದ್ದವನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಮಡೆನೂರು ಕೃಷಿ ಸಂಶೋಧನಾ ಕೇಂದ್ರದ ವಸತಿ ಗೃಹದ ಹಿಂದೆ ಗಾಂಜಾ ಗಿಡ ಬೆಳೆದಿದ್ದ ಆರೋಪಿಯನ್ನು ಶಾಂತಿಗ್ರಾಮ ಪೋಲಿಸರು ಬಂಧಿಸಿದ್ದು, 4 ಕೆ.ಜಿ. ಹಸಿ ಗಾಂಜಾ ಸೊಪ್ಪನ್ನು ವಶಕ್ಕೆ ಪಡೆದಿದ್ದಾರೆ.

ಸಾರಾಪುರ ವಸತಿಗೃಹದಲ್ಲಿ ವಾಸವಿರುವ ದಿನಗೂಲಿ ನೌಕರ ಕುಮಾರ (50) ಬಂಧಿತ ವ್ಯಕ್ತಿ. ಖಚಿತ ಮಾಹಿತಿ ಆಧರಿಸಿ ಶಾಂತಿಗ್ರಾಮ ಠಾಣೆಯ ಪಿಎಸ್‌ಐ ಕೃಷ್ಣ ಅವರು ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದರು. ಶಾಂತಿಗ್ರಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು