ಹಾಸನ: ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು, ಗುರುವಾರ ತಾಲ್ಲೂಕಿನ ಗೊರೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದಿಢೀರ್ ಭೇಟಿ ನೀಡಿ, ಬಿಸಿಯೂಟ ಪರಿಶೀಲಿಸಿದರು.

ಕಾರ್ಯಕ್ರಮದ ನಿಮಿತ್ತ ತೆರಳುತ್ತಿದ್ದಾಗ, ಮಾರ್ಗಮಧ್ಯೆ ಗೊರೂರಿನ ಶಾಲೆಗೆ ಬಂದ ಅವರು, ಮಕ್ಕಳೊಂದಿಗೆ ಸರದಿ ಸಾಲಿನಲ್ಲಿ ಕುಳಿತು ಬಿಸಿಯೂಟ ಸೇವಿಸುವ ಮೂಲಕ ಗುಣಮಟ್ಟ ಪರೀಕ್ಷೆ ಮಾಡಿದರು.

ಇದೇ ವೇಳೆ ಮಕ್ಕಳೊಂದಿಗೆ ಮಾತನಾಡಿದ ಅವರು, ‘ನಿಮಗೆ ಹಾಲು ಇಷ್ಟಾನಾ’ ಎಂದು ಕೇಳಿದರು. ‘ಊಟ ಹೇಗಿದೆ? ಹಾಲು ಚೆನ್ನಾಗಿದೆಯಾ? ಪ್ರತಿದಿನ ಗುಣಮಟ್ಟದ ಊಟ ನೀಡುತ್ತಿದ್ದಾರೆಯೇ’ ಎಂದು ಮಕ್ಕಳಿಂದ ಮಾಹಿತಿ ಪಡೆದರು.

ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ್ದರಿಂದ ಶಾಲೆಯ ಶಿಕ್ಷಕರು, ಸಿಬ್ಬಂದಿ ಕೆಲಕಾಲ ಅಚ್ಚರಿಗೆ ಒಳಗಾದರು.

ಪರಿಶೀಲನೆ ಬಳಿಕ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಯಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ ಲತಾಕುಮಾರಿ, ‘ಮಕ್ಕಳಿಗೆ ಅಚ್ಚುಕಟ್ಟಾದ ಊಟ ಹಾಗೂ ಇತರೆ ವ್ಯವಸ್ಥೆ ಮಾಡಬೇಕು’ ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.