ಮಂಗಳವಾರ, ಡಿಸೆಂಬರ್ 1, 2020
18 °C
ಹಳೇಬೀಡು ಸಮೀಪದ ದೊಡ್ಡಗದ್ದವಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ಘಟನೆ

ಹಳೇಬೀಡಿನ ದೊಡ್ಡಗದ್ದವಳ್ಳಿಯಲ್ಲಿ ಹೊಯ್ಸಳರ ಕಾಲದ ಮಹಾಕಾಳಿ ವಿಗ್ರಹ ಭಗ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಳೇಬೀಡು: ಸಮೀಪದ ದೊಡ್ಡಗದ್ದವಳ್ಳಿಯಲ್ಲಿನ, ಹೊಯ್ಸಳರ ಕಾಲದ ಮಹಾಲಕ್ಷ್ಮೀ ದೇವಾಲಯದ ಮಹಾಕಾಳಿ ವಿಗ್ರಹ ಎರಡು ತುಂಡಾಗಿದ್ದು, ಘಟನೆಯು ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಇದನ್ನು ಓದಿ: ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

ನಿಧಿ ಆಸೆಗಾಗಿ ದೇವಾಲಯಕ್ಕೆ ನುಗ್ಗಿದ ಕಿಡಿಗೇಡಿಗಳು, ವಿಗ್ರಹವನ್ನು ಪೀಠದಿಂದ ಮೇಲೆತ್ತುವ ಸಂದರ್ಭದಲ್ಲಿ ಮೂರ್ತಿಗೆ ಹಾನಿ ಆಗಿರಬಹುದು ಎಂದು ಶಂಕಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರತಿನಿತ್ಯ ಅರ್ಚಕರು ಪೂಜೆ ನೆರವೇರಿಸಿ ಮನೆಗೆ ಹೋಗುತ್ತಾರೆ. ನಂತರ ಕೇಂದ್ರ ಪುರಾತತ್ವ ಸರ್ವೇಕ್ಷಣಾ ಇಲಾಖೆಯವರು ದೇವಾಲಯದ ರಕ್ಷಣೆ ನೋಡಿಕೊಳ್ಳುತ್ತಾರೆ. ಆದರೆ ರಾತ್ರಿ ವೇಳೆ ಕಾವಲುಗಾರರನ್ನು ನೇಮಕ ಮಾಡದೇ ಇರುವುದು ಘಟನೆಗೆ ಕಾರಣ ಎನ್ನಲಾಗಿದೆ. 

‘ರಜೆ ಹಾಕಿ ಊರಿಗೆ ಹೋದ ಸಮಯದಲ್ಲಿ ಘಟನೆ ನಡೆದಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಹಾಗೂ ಇಲಾಖೆಯಿಂದ ಈ ಕುರಿತು ತನಿಖೆ ನಡೆಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಸಹಾಯಕ ಸ್ಮಾರಕ ಸಂರಕ್ಷಣಾಧಿಕಾರಿ ಕಿಶೋರ್ ರೆಡ್ಡಿ ‘‍ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು