ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅನುದಾನ ದುರುಪಯೋಗ: ಕಠಿಣ ಕ್ರಮ’

ಎಸ್‌.ಸಿ, ಎಸ್‌.ಟಿ ಹಿತರಕ್ಷಣಾ ಸಭೆಯಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಎಚ್ಚರಿಕೆ
Last Updated 31 ಜನವರಿ 2022, 16:20 IST
ಅಕ್ಷರ ಗಾತ್ರ

ಅರಸೀಕೆರೆ: ‘ಪರಿಶಿಷ್ಟ ಜಾತಿ ಮತ್ತು ಪಂಗಡದವರ ಹಿತಕ್ಕಾಗಿ ಮೀಸಲಿರುವ ಶೇ 22.5 ಅನುದಾನ ವನ್ನುಅವರಿಗೆಖರ್ಚು ಮಾಡಬೇಕು. ಇತರೆ ವರ್ಗಕ್ಕೆ ಖರ್ಚು ಮಾಡಿದ ಅಧಿಕಾರಿಗಳು ಮತ್ತು ಪಿಡಿಒ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಎಚ್ಚರಿಕೆ ನೀಡಿದರು.

ತಾಲ್ಲೂಕು ಪಂಚಾಯಿತಿಯಲ್ಲಿ ಸೋಮವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಪರಿಶಿಷ್ಟರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

‘ಪರಿಶಿಷ್ಟ ಜಾತಿ ಮತ್ತು ಪಂಗಡ ದವರ ಆರ್ಥಿಕ ಅಭಿವೃದ್ಧಿಗೆ ಸರ್ಕಾರ ವಿಶೇಷ ಯೋಜನೆ ಮತ್ತು ಕಾರ್ಯಕ್ರಮ ಗಳನ್ನು ಜಾರಿಗೆ ತಂದಿದೆ. ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ತುಳಿತಕ್ಕೆ ಒಳಗಾಗಿ ರುವ ಪರಿಶಿಷ್ಟರಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಪರಿಶಿಷ್ಟರ ಅನುದಾನ ದುರುಪಯೋಗವಾಗದಂತೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ನಿಗಾ ವಹಿಸಬೇಕು. ಇಲ್ಲದಿದ್ದರೆ ಅಂಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳ ಲಾಗುವುದು’ ಎಂದು ಎಚ್ಚರಿಸಿದರು.

‘ಸ್ಥಗಿತಗೊಂಡಿರುವಛಲವಾದಿ ಸಮುದಾಯ ಭವನ ನಿರ್ಮಾಣ ಕಾರ್ಯಆರಂಭಿಸಬೇಕು ಎಂದು ತಾಲ್ಲೂಕು ಛಲವಾದಿ ಮುಖಂಡರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದಶಿವಲಿಂಗೇಗೌಡ, ‘ಛಲವಾದಿ ಸಮುದಾಯ ಭವನ ನಿರ್ಮಾಣವಾಗುತ್ತಿರುವ ಜಾಗದಲ್ಲಿ ಖಾಸಗಿ ಶಾಲೆ ಮಾಲೀಕರು ಸಮುದಾಯ ಭವನ ನಿರ್ಮಾಣವಾಗದಂತೆ ತಡೆಯಾಜ್ಞೆ ತಂದಿದ್ದಾರೆ. ಈಗ ಆ ಶಾಲೆ ತೆರವುಗೊಳಿಸಲುಲೋಕಾಯುಕ್ತದಿಂದ ಆದೇಶ ಬಂದಿದೆ. ಹಾಗಾಗಿಛಲವಾದಿ ಸಮುದಾಯ ಭವನ ನಿರ್ಮಾಣಕ್ಕೆ ಬೇರೆಡೆ ಜಾಗ ಕೊಡುವಂತೆ ಸಚಿವ ಶ್ರೀರಾಮುಲು ಅವರಿಗೆ ಮನವಿ ಮಾಡಲಾಗಿದೆ’ ಎಂದರು.

ಮಾಡಾಳು, ಚಲ್ಲಾಪುರ, ನಾಗವೇದಿ, ಗ್ರಾಮಗಳಲ್ಲಿಪರಿಶಿಷ್ಟರಸ್ಮಶಾನಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ಮುಖಂಡರು ಆಗ್ರಹಿಸಿದರು.

ಮಾಡಾಳು ಗ್ರಾಮದಲ್ಲಿರುವ ಸರ್ಕಾರಿ ಶಾಲಾ ಕಟ್ಟಡ ಶಿಥಿಲವಾಗಿದೆ ಯಾವಾಗ ಮಕ್ಕಳ ಮೇಲೆ ಬೀಳುತ್ತದೋ ಎಂಬ ಆತಂಕ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಭಯ ಶುರುವಾಗಿದೆ ಕೂಡಲೇ ನೂತನ ಶಾಲಾ ಕಟ್ಟಡ ನಿರ್ಮಿಸಿಕೊಡಬೇಕು ಎಂದು ಮಾಡಾಳು ಗ್ರಾಮದ ವಿಜಯ್ ಮತ್ತು ಕೆಲವರು ಒತ್ತಾಯಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ‘ತಾಲ್ಲೂಕಿನಲ್ಲಿ 110 ಶಾಲೆಗಳನ್ನು ನೆಲಸಮ ಮಾಡಿ ನೂತನ ಕಟ್ಟಡಗಳ ನಿರ್ಮಾಣಕ್ಕೆ ಹಾಗೂ 258 ಶಾಲೆಗಳ ದುರಸ್ತಿಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.

ಸಂಕೋಡನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ತೆರೆಯಬೇಕು ಎಂದು ಗ್ರಾಮದ ಶಂಕರಯ್ಯ ಮಾಡಿದ ಮನವಿಗೆ ಶಾಸಕರು ಉತ್ತರಿಸಿ, ‘ಈಗಾಗಲೇ ತಾಲ್ಲೂಕಿನ 530 ಗ್ರಾಮಗಳಿಗೆ ಕುಡಿಯುವ ನೀರಿನ ಪೂರೈಕೆ ಆಗುತ್ತಿದೆ. ಯಗಚಿ ಜಲಾಶಯದ ಸುಮಾರು 16 ಹಳ್ಳಿಗಳಿಗೆ ಸದ್ಯದಲ್ಲೇ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು’ ಎಂದರು.

ಸಭೆಗೆ ಗೈರು ಹಾಜರಾಗಿ ರುವ ಅಧಿಕಾರಿಗಳಿಗೆ ತಕ್ಷಣವೇ ನೋಟಿಸ್ ಜಾರಿ ಮಾಡುವಂತೆ ತಹಶೀಲ್ದಾರ್‌ಗೆ ಸೂಚಿಸಿದರು.

ತಾ.ಪಂ.ಇಒ ನಟರಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗೋಪಾಲಪ್ಪ, ಡಿವೈಎಸ್ಪಿ ಅಶೋಕ್, ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT