ಸೋಮವಾರ, ಆಗಸ್ಟ್ 15, 2022
27 °C
ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಸೌಲಭ್ಯ ವಿತರಿಸಿದ ಪ್ರೀತಂ ಗೌಡ

ಆರ್ಥಿಕ ಸದೃಢತೆಯಿಂದ ಉತ್ತಮ ಜೀವನ ನಿರ್ವಹಣೆ: ಪ್ರೀತಂ ಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಆರ್ಥಿಕವಾಗಿ ಸದೃಢರಾದಾಗ ಸಮಾಜದಲ್ಲಿ ಉತ್ತಮವಾಗಿ ಜೀವನ ನಡೆಸಲು ಸಾಧ್ಯ. ಈ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಪ್ರೀತಂ ಜೆ. ಗೌಡ ಸಲಹೆ ನೀಡಿದರು.

ನಗರದ ಕನ್ನಡ ಸಾಹಿತ್ಯ ಪರಿಷತ್‌ ಸಭಾಂಗಣದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ, ಸ್ವ-ಸಹಾಯ ಗುಂಪುಗಳಿಗೆ ಸಾಲ ಮಂಜೂರಾತಿ ಪತ್ರ ಹಾಗೂ ಚೆಕ್ ವಿತರಣೆ ಮತ್ತು ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಪಂಪ್‌ ಮೋಟಾರ್ ಇತರ ಪರಿಕರಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಎರಡು ವರ್ಷದಲ್ಲಿ ನೂರಾರು ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗಿದೆ. ಈ ಹಿಂದೆ ಹಾಸನ ವಿಧಾನಸಭೆ ಕ್ಷೇತ್ರದಲ್ಲಿ ವಾರ್ಷಿಕ ಕೇವಲ 5 ಅಥವಾ 6 ಮಂದಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಲಾಗುತ್ತಿತ್ತು. ಇದೀಗ ವಿವಿಧ ಯೋಜನೆಗಳಲ್ಲಿ 500 ಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊಳೆವೆಬಾವಿ ಮೋಟಾರ್ ಹಾಗೂ ಮಹಿಳಾ ಸಂಘಗಳಿಗೆ ಧನಸಹಾಯದ ಚೆಕ್ ವಿತರಿಸಲಾಗಿದೆ ಎಂದು ತಿಳಿಸಿದರು.

ಹಾಸನ ವಿಧಾನಸಭೆ ಕ್ಷೇತ್ರದಲ್ಲಿ ಇದುವರೆಗೆ ಸಣ್ಣ ನೀರಾವರಿ ಇಲಾಖೆಯ ಮೂಲಕ 1,200 ಕೊಳವೆ ಬಾವಿಗಳನ್ನು ಮಂಜೂರು ಮಾಡಲಾಗಿದೆ ಎಂದರು.

ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಚೆಕ್ ಡ್ಯಾಂ, ರಸ್ತೆ ಡಾಂಬರೀಕರಣ ಸೇರಿದಂತೆ ಮೂಲಸೌಕರ್ಯ ಒದಗಿಸಲಾಗುತ್ತಿದೆ. ದಲಿತ, ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪ್ರೀತಂ ಗೌಡ ಭರವಸೆ ನೀಡಿದರು.

ನಿಗಮದ ಜಿಲ್ಲಾ ವ್ಯವಸ್ಥಾಪಕ ಮನುಕುಮಾರ್, ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಶ್ರುತಿ, ಶಂಭುಲಿಂಗಯ್ಯ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು