ಅರಸೀಕೆರೆ: ‘ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದವರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಕೊಳವೆಬಾವಿಗಳನ್ನು ಕೊರೆಸಲಾಗಿದ್ದು, ಮುಂದಿನ ದಿನಗಳಲ್ಲಿಯೂ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ಗೃಹಮಂಡಳಿ ಅಧ್ಯಕ್ಷ, ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.

ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಗಂಗಾಕಲ್ಯಾಣ ಯೋಜನೆಯಡಿ 2021–22, 22–23ರ ಸಾಲಿನ ಪರಿಶಿಷ್ಟ ಜಾತಿ ಮತ್ತು ಪಂಗಡದ 35 ಫಲಾನುಭವಿಗಳಿಗೆ ಶುಕ್ರವಾರ ಪಂಪ್ಸೆಟ್ ಮತ್ತು ಇತರೆ ಉಪಕರಣಗಳನ್ನು ವಿತರಿಸಿ ಮಾತನಾಡಿದರು.

‘ರೈತಾಪಿ ವರ್ಗದವರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದೆನೆ. ಸಣ್ಣ ನೀರಾವರಿ ಯೋಜನೆಗಳಲ್ಲಿ ಸಾವಿರಾರು ಕೊಳವೆಬಾವಿಗಳನ್ನು ಕೊರೆಸಿ ಕೃಷಿ ಚಟುವಟಿಕೆಗಳಲ್ಲಿ ನಿರತರಾಗುವಂತೆ ಮಾಡಿದ್ದೇನೆ. ಕ್ಷೇತ್ರದಲ್ಲಿ ನೂರಾರು ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗಿದ್ದು, ಅಂತರ್ಜಲ ಮಟ್ಟ ಹೆಚ್ಚಾಗಿದೆ. ಇದರಿಂದ ಕೊಳವೆ ಬಾವಿಗಳಲ್ಲಿ ಉತ್ತಮ ಜಲ ಸಿಗುತ್ತಿದ್ದು ರೈತರು ಸಂತಸದಿಂದ ಇದ್ದಾರೆ’ ಎಂದು ಹೇಳಿದರು.

‘ಈ ವರ್ಷ ಸುಮಾರು 200 ಕೊಳವೆ ಬಾವಿ ಕೊರೆಸಲಾಗಿದೆ. ಒಂದು ಕೊಳವೆ ಬಾವಿಗೆ ₹3 ಲಕ್ಷ ಸಹಾಯಧನ ನೀಡಲಾಗುತ್ತಿತ್ತು, ಇದೀಗ ₹5 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಈ ಎಲ್ಲ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.