ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಸ್ತೆ, ಸೇತುವೆ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಶಾಸಕ ಎ. ಮಂಜು ಸೂಚನೆ

Published 26 ಜೂನ್ 2024, 13:42 IST
Last Updated 26 ಜೂನ್ 2024, 13:42 IST
ಅಕ್ಷರ ಗಾತ್ರ

ಅರಕಲಗೂಡು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣ ಗೊಳಿಸುವಂತೆ ಶಾಸಕ ಎ. ಮಂಜು ಲೋಕೋಪಯೋಗಿ ಮತ್ತು ಕೆಆರ್‌ಐಡಿಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದರು. ಹಾಸನ – ಪಿರಿಯಾಪಟ್ಟಣ ರಸ್ತೆಗೆ ತುರ್ತಾಗಿ ಇನ್ನೊಂದು ಕೋಟ್ ಟಾರ್ ಹಾಕುವಂತೆ ಹಾಗೂ ರಾಮನಾಥಪುರದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿಯನ್ನು ಚುರುಕುಗೊಳಿಸಿ ಪೂರ್ಣ ಗೊಳಿಸುವಂತೆ ಸೂಚಿಸಿದರು.

ರಸ್ತೆ ಬದಿಯಲ್ಲಿ ಅರಣ್ಯ ಇಲಾಖೆ ಅವೈಜ್ಞಾನಿಕವಾಗಿ ಗಿಡಗಳನ್ನು ನೆಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಹಾಗೂ ಎಷ್ಟು ದೂರದಲ್ಲಿ ಗಿಡಗಳನ್ನು ನೆಡಬೇಕು ಎಂಬುದನ್ನು ಸಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದುವರೆಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಮಳೆಗಾಲದಲ್ಲಿ ಜನ, ವಾಹನಗಳಿಗೆ ಸಂಚಾರಕ್ಕೆ ತೊಂದರೆಯಾಗದಂತೆ ರಸ್ತೆ ನಿರ್ವಹಣೆ ನಡೆಸಲು ಇಲಾಖೆಗಳು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT