ಗುರುವಾರ , ಆಗಸ್ಟ್ 11, 2022
23 °C

ಡ್ರಗ್ಸ್‌ ಬಗ್ಗೆ ಬಾಯ್ಬಿಟ್ಟರೆ ಟಾರ್ಗೆಟ್‌ ಆಗುವೆ: ಶಾಸಕ ಕೆ.ಎಂ.ಶಿವಲಿಂಗೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Shivalinge Gowda

ಅರಸೀಕೆರೆ: ‘ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಎಲ್ಲೆಲ್ಲಿ ನಡೆಯುತ್ತಿದೆ ಎಂಬುದು ಗೊತ್ತು. ಆದರೆ, ಅದರ ಬಗ್ಗೆ ಹೇಳುವುದಿಲ್ಲ. ಏಕೆಂದರೆ ಅದನ್ನೇ ಮುಂದಿಟ್ಟುಕೊಂಡು ನನ್ನ ಟಾರ್ಗೆಟ್‌ ಮಾಡುತ್ತಾರೆ’ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.

ತಾಲ್ಲೂಕಿನಲ್ಲಿ ಶನಿವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ತಮ್ಮ ಪುತ್ರ ಡ್ರಗ್ಸ್‌ ತೆಗೆದುಕೊಂಡು ಜೀವನ ಹಾಳು ಮಾಡಿಕೊಳ್ಳುತ್ತಿದ್ದು, ಅವನನ್ನು ಉಳಿಸಿಕೊಡುವಂತೆ ವಿಧಾನಸಭೆಯಲ್ಲಿ ಶಾಸಕರೊಬ್ಬರು ಅಂಗಲಾಚಿ ಬೇಡಿಕೊಂಡಿದ್ದರು. ಆದರೆ ಸರ್ಕಾರ ದೃಢ ನಿರ್ಧಾರ ಕೈಗೊಳ್ಳಲಿಲ್ಲ. ಈಗಲಾದರೂ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಂಡು ಸಂಪೂರ್ಣವಾಗಿ ನಿಯಂತ್ರಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು