ಸೋಮವಾರ, ಜೂನ್ 14, 2021
25 °C

ಆರೋಗ್ಯ ಕೇಂದ್ರಗಳಿಗೆ ಶಾಸಕ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅರಸೀಕೆರೆ: ತಾಲ್ಲೂಕಿನ ಕಣಕಟ್ಟೆ ಹೋಬಳಿಯ ಪ್ರಮುಖ ಸರ್ಕಾರಿ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ತಾಲ್ಲೂಕು ಆರೋಗ್ಯಾಧಿಕಾರಿ, ತಾಪಂ ಇಒ ಜತೆ ಭೇಟಿ ನೀಡಿ ಪರಿಶೀಲಿಸಿದರು.

ಮಾಡಾಳು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯರು, ಗ್ರಾಮಸ್ಥರ ಜತೆ ಸಭೆ ನಡೆಸಿದರು.

ರಾಜ್ಯ ಸರ್ಕಾರ ಕೆಲವು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಇದ್ದುದರಿಂದ ರಾಜ್ಯದಲ್ಲಿ ಸೋಂಕು ಹೆಚ್ಚಳವಾಗಿದೆ. ಗ್ರಾಮೀಣ ಪ್ರದೇಶದ ಜನರು ಹಾಗೂ ರೈತರ ಬಗ್ಗೆ ಕಾಳಜಿ ವಹಿಸದೆ ಅವೈಜ್ಞಾನಿಕವಾಗಿ ಲಾಕ್‌ಡೌನ್ ಜಾರಿಗೊಳಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮೀಣ ಪ್ರದೇಶದಲ್ಲಿರುವ ಪ್ರತಿ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಗ್ರಾಮ ಪಂಚಾಯಿತಿಗಳು ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿ ಸಬೇಕು ಎಂದು ಮನವಿ ಮಾಡಿದರು.

ಜೆ.ಸಿ.ಪುರ, ದೊಡ್ಡ ಮೇಟಿಕುರ್ಕೆ, ಕಾಮಸಮುದ್ರ, ಮಾಡಾಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ತಾಲ್ಲೂಕು ಆರೋಗ್ಯ ಆರೋಗ್ಯಾಧಿ ಕಾರಿ ನಾಗಪ್ಪ, ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ನಟರಾಜ್, ಜಿಲ್ಲಾ ಪಂಚಾಯಿತಿ ಸದಸ್ಯ ಮಾಡಾಳು ಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ಕೊಡ್ಲಿ ಬಸವರಾಜ್, ಮುಖಂಡರಾದ ನಂಜುಂಡಶೆಟ್ಟಿ, ಜಯಣ್ಣ, ಸುರೇಶ್, ಶಿವಲಿಂಗಪ್ಪ, ವಿಜಿ, ದಾಸಪ್ಪ, ತಿಮ್ಮಪ್ಪ, ಗ್ರಾಮಸ್ಥರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.