ಮಂಗಳವಾರ, ಫೆಬ್ರವರಿ 25, 2020
19 °C

ಮೋದಿ ಕಚೇರಿಯಲ್ಲಿ ಕೆಲಸ ಮಾಡುವೆ: ಉಗ್ರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ‘ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಿ ಮತ್ತೆ 303 ಸಂಸದರು ಆಯ್ಕೆಯಾದರೆ ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಯಲ್ಲಿ ಕೆಲಸ ಮಾಡಿಕೊಂಡು ಇರುತ್ತೇನೆ’ ಎಂದು ಕಾಂಗ್ರೆಸ್‌ ಮುಖಂಡ ವಿ.ಎಸ್. ಉಗ್ರಪ್ಪ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಇವಿಎಂ ಇಲ್ಲದೆ ಮತ್ತೆ ಚುನಾವಣೆ ನಡೆಸಿ ಗೆದ್ದರೆ ಯಾವತ್ತೂ ಮೋದಿಯನ್ನು ಟೀಕಿಸುವುದಿಲ್ಲ. ದೇಶದಲ್ಲಿ ನಿರುದ್ಯೋಗ, ಬಡತನ, ಆರ್ಥಿಕ ಹಿಂಜರಿತಗಳನ್ನು ಮರೆಮಾಚುವ ಸಲುವಾಗಿ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಜಾರಿಗೊಳಿಸಿದ್ದಾರೆ. ಪ್ರಪಂಚದ ಯಾವುದೇ ರಾಷ್ಟ್ರದಲ್ಲೂ ಕೂಡ ಜಾತಿ ಆಧಾರದ ಮೇಲೆ ಪೌರತ್ವ ಕಾಯ್ದೆ ಜಾರಿಗೆ ತಂದಿಲ್ಲ’ ಎಂದರು

‘ಪ್ರಧಾನಿ ನರೇಂದ್ರ ಮೋದಿ ಒಬ್ಬ ಆಧುನಿಕ ಭಸ್ಮಾಸುರ, ಯಾವುದಕ್ಕೆ ಕೈ ಹಾಕಿದರು ಅದು ಭಸ್ಮವಾಗುತ್ತದೆ. ಬಿಜೆಪಿ ಕೂಡ ಕುಟುಂಬ ರಾಜಕೀಯ ಮಾಡುತ್ತಿದೆ. ಯಡಿಯೂರಪ್ಪ ತಮ್ಮ ಮಗನನ್ನು ಸಂಸದನಾಗಿ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕರು ತಮ್ಮ ಕುಟುಂಬದ ಸದಸ್ಯರನ್ನು ಶಾಸಕರನ್ನು ಮಾಡಿಕೊಳ್ಳುವ ಮೂಲಕ ಕುಟುಂಬ ರಾಜಕೀಯ ಮಾಡುತ್ತಿದೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು