ಹಾಸನ: ಜಿಲ್ಲೆಯಲ್ಲಿ ಮಂಗಳವಾರವೂ ಉತ್ತಮ ಮಳೆಯಾಗಿದ್ದು, ರೈತರಲ್ಲಿ ಆಶಾಭಾವ ಮೂಡಿಸಿದೆ.

ಮುಂಗಾರು ಬಿತ್ತನೆಗೆ ಮಳೆಯ ಅವಶ್ಯಕತೆ ಹೆಚ್ಚಿದ್ದು, ಮೂರು ದಿನಗಳಿಂದ ತುಂತುರು ಮಳೆ, ಮೋಡ ಕವಿದ ವಾತಾವರಣ ಹಾಗೂ ಗಾಳಿ ಬೀಸುತ್ತಿರುವುದರಿಂದ ಕೃಷಿ ಚಟುವಟಿಕೆಗಳುಚುರುಕುಗೊಂಡಿವೆ.

ಮಲೆನಾಡು, ಅರೆ ಮಲೆನಾಡು ಭಾಗದಲ್ಲಿ ಮಳೆ ಬಿರುಸು ಪಡೆದಿರುವುದರಿಂದ ಕೃಷಿ ಚಟುವಟಿಕೆ ಗರಿಗೆದರಿ. ಭತ್ತದ ಗದ್ದೆಗಳಲ್ಲಿ ಸಸಿ ಮಡಿ ತಯಾರಿಕೆ, ಕಾಫಿ ತೋಟದಲ್ಲಿ ಗೊಬ್ಬರ ಹಾಕುವ ಕಾರ್ಯ ನಡೆಯುತ್ತಿದೆ. ಲಾಕ್‌ಡೌನ್ ಜಾರಿಯಲ್ಲಿ ಇರುವುದರಿಂದ ಕಾರ್ಮಿಕರ ಕೊರತೆ ಉಂಟಾಗಿದೆ.

ಹಾಸನ, ಅರಕಲಗೂಡು ತಾಲ್ಲೂಕಿನಲ್ಲಿ ಆಲೂಗಡ್ಡೆ, ಮುಸುಕಿನ ಜೋಳ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದರೆ, ಮಲ್ಲಿಪಟ್ಟಣದಲ್ಲಿ ಭತ್ತದ ಸಸಿ ಮಡಿ ತಯಾರಿಕೆಗೆ ರೈತರು ಭೂಮಿ ಹದ ಮಾಡುತ್ತಿದ್ದಾರೆ. ಕೊಣನೂರು ಭಾಗದಲ್ಲಿ ತಂಬಾಕು ನಾಟಿ ಕಾರ್ಯ ಪೂರ್ಣಗೊಂಡಿದೆ. ಇನ್ನುಹಲವು ಕಡೆ ಮುಸುಕಿನ ಜೋಳ, ದ್ವಿದಳ ಧಾನ್ಯಗಳು, ಭತ್ತ, ರಾಗಿ ಬೆಳೆಗಳ ಕಾರ್ಯ ಪ್ರಾಂಭವಾಗಬೇಕಿದೆ.

ಬೆಳಿಗ್ಗೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ನಗರದ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಗುಂಡಿಗಳಲ್ಲಿ ನೀರು ನಿಂತಿತ್ತು. ತಗ್ಗು ಪ್ರದೇಶಗಳು ಜಲಾವೃತ್ತವಾಗಿದೆ.

ಹಾಸನ ನಗರ ಹಾಗೂ ಸುತ್ತಮುತ್ತಲ ಪ್ರದೇಶ, ಆಲೂರು, ಬೇಲೂರು, ಅರಕಲಗೂಡು, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಬಿಟ್ಟು ಬಿಟ್ಟು ಜಿಟಿಜಿಟಿ ಮಳೆ ಸುರಿಯುತ್ತಿದೆ. ಸಕಲೇಶಪುರು, ಹೆತ್ತೂರು, ಮಾರನಹಳ್ಳಿ, ಯಸಳೂರು, ಶುಕ್ರವಾರ ಸಂತೆಯಲ್ಲಿ ಧಾರಾಕಾರ ಮಳೆಯಾಗಿದೆ. ಕೆಲವು ಕಡೆ ಜೋರು ಮಳೆಯ ಜೊತೆಗೆ ಗಾಳಿಯೂ ಬೀಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.