ಮೊಸಳೆ ಹೊಸಳ್ಳಿ: ಎಂಜಿನಿಯರಿಂಗ್ ಕಾಲೇಜು ಶುರು, ತಾಂತ್ರಿಕ ಶಿಕ್ಷಣ ಸಮಿತಿ ಅನುಮತಿ

ಸೋಮವಾರ, ಮೇ 27, 2019
24 °C
5 ಕೋರ್ಸ್‍ ಲಭ್ಯ

ಮೊಸಳೆ ಹೊಸಳ್ಳಿ: ಎಂಜಿನಿಯರಿಂಗ್ ಕಾಲೇಜು ಶುರು, ತಾಂತ್ರಿಕ ಶಿಕ್ಷಣ ಸಮಿತಿ ಅನುಮತಿ

Published:
Updated:

ಹಾಸನ: ಜಿಲ್ಲೆಯಲ್ಲಿ ಮತ್ತೊಂದು ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಮೊಸಳೆ ಹೊಸಳ್ಳಿಯಲ್ಲಿ ಪ್ರಾರಂಭವಾಗಲಿದೆ.

ಈಗಾಗಲೇ ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಸಮಿತಿ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಿ 5 ಕೋರ್ಸ್‍, ಬೋಧಕ, ಬೋಧಕೇತರ ಸಿಬ್ಬಂದಿ ಹುದ್ದೆಗಳಿಗೂ ಮಂಜೂರಾತಿ ನೀಡಿದೆ.

ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಹಿರಿಯ ಬೋಧಕ ರಂಗಸ್ವಾಮಿ ಅವರಿಗೆ ಕಾಲೇಜಿನ ಪ್ರಾಂಶುಪಾಲರ ಜವಾಬ್ದಾರಿ ವಹಿಸಲಾಗಿದೆ.

ಹಾಲಿ ಬಿ.ಇ ಸಿವಿಲ್, ಮೆಕಾನಿಕಲ್, ಎಲೆಕ್ಟ್ರಾನಿಕ್ಸ್ ಹಾಗೂ ಕಂಪ್ಯೂಟರ್ ಸೈನ್ಸ್ ಕೋರ್ಸ್‍ಗಳಿಗೆ ತಲಾ 60 ವಿದ್ಯಾರ್ಥಿಗಳಂತೆ ಮೊದಲ ವರ್ಷಕ್ಕೆ 300 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಇದೆ.

ಕಾಲೇಜು ಪ್ರಾರಂಭಿಕ ವರ್ಷದಲ್ಲಿ ಅಗತ್ಯವಿರುವ 14 ಮಂದಿ ಬೋಧಕ ಸಿಬ್ಬಂದಿಗಳನ್ನು ಹಾಸನ, ಮಂಡ್ಯ ರಾಮನಗರ ಸೇರಿದಂತೆ ವಿವಿಧ ಕಾಲೇಜುಗಳಿಂದ ನಿಯೋಜಿಸಲಾಗಿದ್ದು, ಶೈಕ್ಷಣಿಕ ವರ್ಷದ ಪಠ್ಯ ಹಾಗೂ ಪ್ರಾಯೋಗಿಕ ಬೋಧನೆಗಳಿಗೆ ಯಾವುದೇ ಕೊರತೆ ಉಂಟಾಗಲಾರದು ಎಂದು ನಿಯೋಜಿತ ಪ್ರಾಂಶುಪಾಲ ರಂಗಸ್ವಾಮಿ ತಿಳಿಸಿದ್ದಾರೆ.

ಈ ಕಾಲೇಜು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾಗಿ ಕಾರ್ಯ ನಿರ್ವಹಿಸಲಿದೆ. ವಿದ್ಯಾರ್ಥಿಗಳು ಕೌನ್ಸಲಿಂಗ್ ವೇಳೆ ಮೇಲ್ಕಂಡ ಕೋರ್ಸ್‍ಗಳಿಗೆ ಪ್ರವೇಶ ಪಡೆಯಬಹುದು ಎಂದು ಅವರು ಹೇಳಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !