ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನಾಂಬ ದರ್ಶನೋತ್ಸವ: ಭಕ್ತರಿಗೆ ಅಗತ್ಯ ಸೌಕರ್ಯ ಕಲ್ಪಿಸಿ- ಪ್ರಜ್ವಲ್ ರೇವಣ್ಣ

ಶ್ರೀ ಹಾಸನಾಂಬ- ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಿರ್ವಹಣೆ ಕುರಿತು ನಡೆದ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಸೂಚನೆ
Published 29 ಆಗಸ್ಟ್ 2023, 14:19 IST
Last Updated 29 ಆಗಸ್ಟ್ 2023, 14:19 IST
ಅಕ್ಷರ ಗಾತ್ರ

ಹಾಸನ: ‘ ನವೆಂಬರ್‌ 2ರಿಂದ 15ರವರೆಗೆ ನಡೆಯುವ ಅಧಿದೇವತೆ ಹಾಸನಾಂಬ ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು’ ಎಂದು ಸಂಸದ ಪ್ರಜ್ವಲ್ ರೇವಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಾಸನಾಂಬ ದೇವಿ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಿರ್ವಹಣೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.

‘ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆಗೆ ಕ್ರಮವಹಿಸಿ ಎಂದು ಸೂಚನೆ ನೀಡಿದ ಅವರು ಸಾರ್ವಜನಿಕರು ಸರದಿ ಸಾಲಿನಲ್ಲಿ ಸಾಗಲು ಯಾವುದೇ ತೊಂದರೆ ಆಗದಂತೆ ಶಾಮಿಯಾನ ಜೊತೆಗೆ ನೀರು, ಮಜ್ಜಿಗೆ ವಿತರಣೆಗೆ ಕೌಂಟರ್ ತೆರೆಯಬೇಕು’ ಎಂದು ತಿಳಿಸಿದರು.

ದೇವಿ ದರ್ಶನಕ್ಕೆ ವಿಶೇಷ ಆಹ್ವಾನಿತರು ಆಗಮಿಸಲಿದ್ದು, ಶಿಷ್ಟಾಚಾರ ಪಾಲನೆ ಜತೆಗೆ ಜನಸಂದಣಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಸ್ಕೌಟ್ಸ್ ಮತ್ತು ಗೈಡ್ಸ್, ಗೃಹ ರಕ್ಷಕದಳ ಜೊತೆಗೆ ಸ್ವಯಂ ಸೇವಕರನ್ನು ಬಳಸಿಕೊಳ್ಳುವಂತೆ ತಿಳಿಸಿದರು. 

ಸ್ವಾಗತ ಕಾಮಾನು, ಹೂವಿನ ಅಲಂಕಾರ, ದೀಪಾಲಂಕಾರಗಳಿಗೆ ನಿಯಮಾನುಸಾರ ವಾರ್ತಾ ಇಲಾಖೆ ಮೂಲಕ ಟೆಂಡರ್ ಕರೆಯಬೇಕು. ದೇವಸ್ಥಾನದ ಸಣ್ಣಪುಟ್ಟ ದುರಸ್ತಿ ಸಂದರ್ಭದಲ್ಲಿ ದೇವಾಲಯದ ಮೂಲ ಸ್ವರೂಪಕ್ಕೆ ದಕ್ಕೆಯಾಗದಂತೆ ನಿಗಾವಹಿಸಬೇಕು. ಜಾತ್ರಾ ಮಹೋತ್ಸವ ಶಾಂತಿಯುತವಾಗಿ ನಡೆಯಲು ಪೊಲೀಸ್ ಇಲಾಖೆ ವತಿಯಿಂದ ಅಗತ್ಯ ಸಿಬ್ಬಂದಿ, ಬ್ಯಾರಿಕೇಡ್ ಮತ್ತಿತರ ವ್ಯವಸ್ಥೆಗೆ ಕ್ರಮವಹಿಸಬೇಕು. ಜಿಲ್ಲೆಯ ಪ್ರೇಕ್ಷಣಿಯ ಸ್ಥಳಗಳ ಕುರಿತು ವಿಡಿಯೊ ಮಾಡಿಸಿ ಸಾರ್ವಜನಿಕರ ಮಾಹಿತಿಗಾಗಿ ಎಲ್‌ಇಡಿ ಪರದೆ ಹಾಗೂ ಸ್ಥಳೀಯ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರ ವ್ಯವಸ್ಥೆ ಮಾಡಬೇಕು’ ಎಂದು ಹೇಳಿದರು.

ಜಿಲ್ಲಾಧಿಕಾರಿ ಸತ್ಯಭಾಮ ಅವರು ಮಾತನಾಡಿ, ‘ಜಾತ್ರಾ ಮಹೊತ್ಸವಕ್ಕೆ ಸಂಬಂದಿಸಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಜಾತ್ರೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಿದ್ಧಪಡಿಸಿದ ರೂಪುರೇಷೆ ಕುರಿತು ಮಾಹಿತಿ ನೀಡಿದರು.

ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ,  ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಕೃಷ್ಣ ಮೂರ್ತಿ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬಿ. ಈ. ಜಗದೀಶ್, ಉಪ ವಿಭಾಗಾಧಿಕಾರಿ ಮಾರುತಿ, ನಗರ ಸಭೆ ಪೌರಾಯ್ತುಕ ಸತೀಶ್ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT