ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಕಲಗೂಡು | ಸರ್ಕಾರಿ ಆಸ್ಪತ್ರೆಗೆ ಸಂಸದ ಪ್ರಜ್ವಲ್ ರೇವಣ್ಣ ಭೇಟಿ

Published 29 ನವೆಂಬರ್ 2023, 12:57 IST
Last Updated 29 ನವೆಂಬರ್ 2023, 12:57 IST
ಅಕ್ಷರ ಗಾತ್ರ

ಅರಕಲಗೂಡು: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬುಧವಾರ ಸಂಸದ ಪ್ರಜ್ವಲ್ ರೇವಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ವೈದ್ಯರು ಸೌಜನ್ಯದಿಂದ ವರ್ತಿಸಿ ಉತ್ತಮ‌ ಚಿಕಿತ್ಸಾ ಸೌಲಭ್ಯ ಒದಗಿಸಬೇಕು. ಮುಖ್ಯವಾಗಿ ಶುಚಿತ್ವ ಕಾಪಾಡಿಕೊಳ್ಳುವಂತೆ ಆಡಳಿತಾಧಿಕಾರಿ ಡಾ. ಸ್ವಾಮಿಗೌಡ ಅವರಿಗೆ ಸೂಚಿಸಿದರು.

‘ಜನೌಷಧಿ ಕೇಂದ್ರ ಹಾಗೂ ಆಸ್ಪತ್ರೆಗೆ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು’ ಎಂದು ಭರವಸೆ ನೀಡಿದರು.

ಆಸ್ಪತ್ರೆ ಮುಂಭಾಗದ ಎರಡು ಕೊಠಡಿಗಳ ಬಾಗಿಲು ಮುಚ್ಚಿದ್ದು, ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಬಸವ ರೆಡ್ಡಪ್ಪ ರೋಣದ್ ಅವರಿಗೆ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT