ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೃತರ ಹೆಸರು ಕೈ ಬಿಡಿ

ಮತದಾರರ ಪಟ್ಟಿ ಪರಿಷ್ಕರಣೆಗೆ ಡಿಸಿ ಸೂಚನೆ
Last Updated 1 ಆಗಸ್ಟ್ 2019, 14:24 IST
ಅಕ್ಷರ ಗಾತ್ರ

ಹಾಸನ: ಮತದಾರರ ಪಟ್ಟಿಯಿಂದ ಮರಣ ಹೊಂದಿದವರ ಹೆಸರನ್ನು ಹೊರ ತೆಗೆಯಲು ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚನೆ ನೀಡಿದ್ದಾರೆ.

ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳೊಂದಿಗೆ ನಡೆದ ವಿಡಿಯೊ ಸಂವಾದದಲ್ಲಿ ಪಾಲ್ಗೊಂಡು, ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಅವರು ಬದುಕಿಲ್ಲದಿದ್ದಲ್ಲಿ ಅಥವಾ ವಾಸವಿಲ್ಲದಿದ್ದಲ್ಲಿ ಅಂತವರನ್ನು ಗುರುತಿಸಿ ಪಟ್ಟಿಯಿಂದ ಕೈ ಬಿಡುವಂತೆ ಹೇಳಿದರು.

ಬಿ.ಎಲ್.ಓ ಹಾಗೂ ಶಿರಸ್ತೆದಾರರು ಗ್ರಾಮಗಳಿಗೆ ಭೇಟಿ ನೀಡಿ, ಮೃತ ಮತದಾರರ ಮರಣ ಪ್ರಮಾಣ ಪತ್ರ ಹಾಗೂ ಇತರ ದಾಖಲಾತಿ ಸಂಗ್ರಹಿಸಿದ ಬಳಿಕ ಪಟ್ಟಿಯಿಂದ ಹೆಸರು ಹೊರತೆಗೆಯುವಂತೆ ಅವರು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿರುವ ಅರ್ಹ ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು. ಗುರುತಿನ ಚೀಟಿಗಳಲ್ಲಿ ತಪ್ಪು ಮಾಹಿತಿ ಇದ್ದಲ್ಲಿ, ತಿದ್ದುಪಡಿ ಮಾಡಲು ಅಗತ್ಯ ಕ್ರಮವಹಿಸಬೇಕು. ಮತದಾರರಿಗೆ ಚುನಾವಣೆಗೆ ಸಂಭಂದಿಸಿದಂತೆ ಯಾವುದೇ ಮಾಹಿತಿಗಾಗಿ ಉಚಿತ ದೂರವಾಣಿ ಸಂಖ್ಯೆ 1950 ಸಂಪರ್ಕಿಸುವಂತೆ ಅರಿವು ಮೂಡಿಸಬೇಕು ಎಂದು ಪಾಷ ಸಲಹೆ ನೀಡಿದರು.

ತಹಸೀಲ್ದಾರರು ಮತಗಟ್ಟೆಗಳಿಗೆ ಭೇಟಿ ನೀಡಿ ಶಿಥಿಲಗೊಂಡಿರುವ ಕೊಠಡಿಗಳ ಪಟ್ಟಿ ಮಾಡಬೇಕು. ಪಕ್ಕದಲ್ಲಿ ಸುಸಜ್ಜಿತ ಕಟ್ಟಡವಿದ್ದಲ್ಲಿ, ಅದಕ್ಕೆ ಸ್ಥಳಾಂತರ ಮಾಡಲು ಪ್ರಸ್ತಾವ ಸಲ್ಲಿಸಬೇಕು ಎಂದರು.

ಮುಂದೆ ನಡೆಯುವ ಯಾವುದಾದರೂ ಚುನಾವಣೆ ವೇಳೆ ಯಾವುದೇ ರೀತಿಯ ತೊಂದರೆ ಆಗದಂತೆ ಗುರುತಿಸಲಾಗಿರುವ ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಇರುವಂತೆ ಎಚ್ಚರವಹಿಸುವಂತೆ ಉಪವಿಭಾಗಾಧಿಕಾರಿಗಳಿಗೆ ಸೂಚನೆ ನೀಡಿದರು.

ಉಪವಿಭಾಗಾಧಿಕಾರಿಗಳಾದ ಎಚ್.ಎಲ್ ನಾಗರಾಜ್, ಕವಿತಾ ರಾಜಾರಾಂ, ತಹಶೀಲ್ದಾರರಾದ ಮೇಘನ, ಶಿರೀನ್ ತಾಜ್, ಶಿವರಾಜ್, ಚುನಾವಣಾ ಶಿರಸ್ತೇದಾರ ಸಿದ್ದರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT