ಸೋಮವಾರ, ಸೆಪ್ಟೆಂಬರ್ 26, 2022
24 °C

ಹೊಳೆನರಸೀಪುರ: ಪತ್ನಿ ಕತ್ತು ಕೊಯ್ದು ಕೊಲೆ, ಪತಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಳೆನರಸೀಪುರ: ಇಲ್ಲಿನ ನ್ಯಾಯಾಲಯದ ಹೊರ ಆವರಣದ ಶೌಚಾಲಯದಲ್ಲಿ ಶನಿವಾರ ತಾಲ್ಲೂಕಿನ ತಟ್ಟೇಕೆರೆ ಗ್ರಾಮದ ಶಿವಕುಮಾರ ತನ್ನ ಪತ್ನಿ ಚೈತ್ರಾ (24) ಕತ್ತು ಕೊಯ್ದು ಕೊಲೆ ಮಾಡಿದ್ದಾರೆ.

ಚನ್ನರಾಯಪಟ್ಟಣ ತಾಲ್ಲೂಕಿನ ಅವ್ವಾರಹಳ್ಳಿಯ ಚೈತ್ರಾ ಹಾಗೂ ಶಿವಕುಮಾರ 6 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. 3 ವರ್ಷಗಳಿಂದ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ವಿಚ್ಛೇದನ ಬಯಸಿ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನಕ್ಕಾಗಿ ಅರ್ಜಿ ಸಲ್ಲಿಸಿದ್ದರು.

ಇಲ್ಲಿನ ನ್ಯಾಯಾಲಯದಲ್ಲಿ ಶನಿವಾರ ವಿಚಾರಣೆ ನಡೆಸಿ ಮುಂದಿನ ದಿನಾಂಕ ನೀಡಲಾಗಿತ್ತು. ಮಧ್ಯಾಹ್ನ 12.30ರ ಸುಮಾರಿಗೆ ನ್ಯಾಯಾಲಯದಿಂದ ಹೊರಗೆ ಬಂದ ಚೈತ್ರಾ, ತನ್ನ ಎರಡು ವರ್ಷದ ಪುತ್ರಿಯೊಂದಿಗೆ ಶೌಚಾಲಯಕ್ಕೆ ಹೋಗಿದ್ದರು. ಅವರನ್ನು ಹಿಂಬಾಲಿಸಿದ ಶಿವಕುಮಾರ ಪತ್ನಿ ಕತ್ತು ಕೊಯ್ದು ಓಡಿ ಹೋಗುತ್ತಿದ್ದಾಗ ಪೊಲೀಸರು ಬಂಧಿಸಿದರು.

ಚೈತ್ರಾ ಅವರಿಗೆ ಇಲ್ಲಿನ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದರು.

‘ಶಿವಕುಮಾರ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರಿಂದ ಚೈತ್ರಾ ತನ್ನ ಮಕ್ಕಳನ್ನು ತವರು ಮನೆಯಲ್ಲಿ ಬಿಟ್ಟು ಬೆಂಗಳೂರಿನ ಗಾರ್ಮೆಂಟ್‍ನಲ್ಲಿ ಕೆಲಸ ಮಾಡುತ್ತಿದ್ದರು. ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು’ ಎಂದು ಚೈತ್ರಾ ಅವರ ಚಿಕ್ಕಪ್ಪ ಜವರೇಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು