ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿ ಕೊಲೆ: ಪತಿ ಬಂಧನ

Last Updated 23 ಅಕ್ಟೋಬರ್ 2019, 12:03 IST
ಅಕ್ಷರ ಗಾತ್ರ

ಹೊಳೆನರಸೀಪುರ: ತಾಲ್ಲೂಕಿನ ಹಾವಿನಮಾರನಹಳ್ಳಿ ಗ್ರಾಮದಲ್ಲಿ ಗುದ್ದಲಿಯಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಿದ ಗಂಡನನ್ನು ಹಳ್ಳಿಮೈಸೂರು ಪೊಲೀಸರು ಬಂಧಿಸಿದ್ದಾರೆ.

ಹಾವಿನ ಮಾರನಹಳ್ಳಿ ಗ್ರಾಮದ ಛಾಯಾದೇವಿ (24) ಅವರನ್ನು ಚಿಕ್ಕಬ್ಯಾಗತಹಳ್ಳಿ ಗ್ರಾಮದ ಗುರುರಾಜ 2 ವರ್ಷಗಳ ಹಿಂದೆ ಮದುವೆ ಆಗಿದ್ದರು. ಸೋಮವಾರ ಸಂಜೆ ವೇಳೆ ಇಬ್ಬರ ನಡುವೆ ಜಗಳ ನಡೆದಿತ್ತು. ಕೋಪಗೊಂಡ ಗುರುರಾಜು ಗುದ್ದಲಿಯಿಂದ ಪತ್ನಿಯ ತಲೆಗೆ ಹೊಡೆದಿದ್ದು ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಳ್ಳಿಮೈಸೂರು ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ. ಇವರಿಗೆ 2 ವರ್ಷದ ಮಗು ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT