ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ‘ಈದ್‌ ಉಲ್‌ ಫಿತ್ರ್‌’ ಸಂಭ್ರಮ

ಜಿಲ್ಲೆಯಾದ್ಯಂತ ಸಾಮೂಹಿಕ ಪ್ರಾರ್ಥನೆ, ಪರಸ್ಪರ ಶುಭಾಶಯ ವಿನಿಮಯ
Last Updated 3 ಮೇ 2022, 15:37 IST
ಅಕ್ಷರ ಗಾತ್ರ

ಹಾಸನ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಮರು‘ಈದ್‌–ಉಲ್‌–ಫಿತ್ರ್‌’ ಅನ್ನು ಮಂಗಳವಾರ ಸಂಭ್ರಮದಿಂದ ಆಚರಿಸಿದರು.

ಕೋವಿಡ್ ಕಾರಣಕ್ಕೆ ಎರಡು ವರ್ಷಗಳಿಂದ ಮನೆಯ ಆಚರಣೆಗಷ್ಟೇಸೀಮಿತವಾಗಿದ್ದ ಹಬ್ಬವನ್ನು ಈ ಬಾರಿ ಸಾಮೂಹಿಕವಾಗಿ ಆಚರಿಸುವ ಮೂಲಕ ಸಂಭ್ರಮಿಸಿದರು.

ಹೊಸ ಬಟ್ಟೆ ಧರಿಸಿ ನಗರದ ಹೊಸಲೈನ್ ರಸ್ತೆಯ ಈದ್ಗಾ ಮೈದಾನದಲ್ಲಿಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಎಲ್ಲರ ಬದುಕಿನಲ್ಲಿ ಶಾಂತಿ, ‌ಸಹಬಾಳ್ವೆ , ಸೌಹಾರ್ದ ಮೂಡುವಂತೆ ಮೌಲ್ವಿಗಳು ಪ್ರಾರ್ಥಿಸಿದರು.

ಪ್ರಾರ್ಥನೆ ಬಳಿಕ ಪರಸ್ಪರರು ಶುಭಾಶಯ ವಿನಿಮಯ ಮಾಡಿಕೊಂಡರು.ವಿವಿಧ ರಾಜಕೀಯ ಪಕ್ಷಗಳ ನಾಯಕರು ಮುಸ್ಲಿಂ ಸಮುದಾಯದವರಿಗೆ ಹಬ್ಬದ ಶುಭಾಶಯ ಕೋರಿದರು. ಹಬ್ಬದ ದಿನವೂ ಮಾರುಕಟ್ಟೆಯಲ್ಲಿ ಖರೀದಿ ಭರಾಟೆಕಂಡು ಬಂತು.

ನಗರದ ಎಲ್ಲ ಮಸೀದಿಗಳಲ್ಲೂ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಧರ್ಮಗುರುಗಳು ಹಬ್ಬದ ವೈಶಿಷ್ಟ್ಯ ಕುರಿತು ವಿವರಿಸುವ ಜತೆಗೆ ಸಮಾಜದಲ್ಲಿ ಸಹಬಾಳ್ವೆಯಿಂದ ಬದುಕಬೇಕು ಎಂದು ಸಂದೇಶ ಸಾರಿದರು.

ರಂಜಾನ್ ಮಾಸದ ಅಂಗವಾಗಿ ಒಂದು ತಿಂಗಳು ಉಪವಾಸ ವ್ರತ (ರೋಜಾ)ಕೈಗೊಂಡ ಮುಸ್ಲಿಮರು, ಹಬ್ಬದ ದಿನದಂದು ಬಡವರಿಗೆ ದಾನ ಮಾಡಿದರು. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT