ಹೆತ್ತೂರು (ಹಾಸನ): ನಾಡಹಬ್ಬ ಮೈಸೂರು ದಸರಾದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತ ಕನ್ನಡಿಗರ ಅಚ್ಚುಮೆಚ್ಚಿನ ಆನೆ ‘ಅರ್ಜುನ’ನ ಭವ್ಯ ಸ್ಮಾರಕವನ್ನು ಯಸಳೂರು ಸಮೀಪದ ದಬ್ಬಳಿಕಟ್ಟೆ ಅರಣ್ಯದಲ್ಲಿ ಬುಧವಾರ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಲೋಕಾರ್ಪಣೆಗೊಳಿಸಿದರು.

2023ರ ಡಿಸೆಂಬರ್ 4ರಂದು ದಬ್ಬಳಿಕಟ್ಟೆ ಮೀಸಲು ಅರಣ್ಯದಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಮದಗಜದೊಂದಿಗೆ ನಡೆದ ಕಾದಾಟದಲ್ಲಿ ಅರ್ಜುನ ಮೃತಪಟ್ಟಿತ್ತು. ಡಿಸೆಂಬರ್ 5ರಂದು ಅದೇ ಸ್ಥಳದಲ್ಲೇ ಅರಣ್ಯ ಇಲಾಖೆಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಎರಡೂವರೆ ವರ್ಷಗಳ ನಂತರ ಅರ್ಜುನನ ಸಮಾಧಿಯ ಮೇಲೆಯೇ ನಿರ್ಮಿಸಲಾದ ಪ್ರತಿಕೃತಿ ಇದೀಗ ಲೋಕಾರ್ಪಣೆಯಾಗಿದೆ.

10 ಅಡಿ ಎತ್ತರ ಹಾಗೂ 13 ಅಡಿ ಉದ್ದವಿರುವ ಈ ಮೂರ್ತಿ, ಅರ್ಜುನನ ಮೂಲ ಸ್ವರೂಪವನ್ನೇ ಹೋಲುತ್ತದೆ. ಶಿಲ್ಪಿ ಧನಂಜಯ ಅವರು ಮೂರ್ತಿಯನ್ನು ಕೆತ್ತಿದ್ದು, ಶಿಲ್ಪಿಗಳು ಒಂದು ವರ್ಷದ ಹಿಂದೆಯೇ ಸಿದ್ಧಪಡಿಸಿದ್ದರು. ಆದರೆ ಸ್ಮಾರಕ ನಿರ್ಮಾಣ ಸ್ಥಳದಲ್ಲಿ ಮೂಲಸೌಕರ್ಯಗಳ ಕೊರತೆ ಇದ್ದುದರಿಂದ ಉದ್ಘಾಟನೆ ವಿಳಂಬವಾಗಿತ್ತು. ಇದೀಗ ಮೂಲಸೌಕರ್ಯ ಕಲ್ಪಿಸಿ ಸ್ಮಾರಕವನ್ನು ಲೋಕಾರ್ಪಣೆಗೊಳಿಸಲಾಯಿತು.

‘8 ಬಾರಿ ಚಿನ್ನದ ಅಂಬಾರಿ ಹೊತ್ತ ಹೆಗ್ಗಳಿಕೆ ಅರ್ಜುನನದ್ದು. ಕಾಡಾನೆ ಸೆರೆ ಕಾರ್ಯಾಚರಣೆ, ದಸರಾ ಸೇರಿ ನಾಡಿನ ಸೇವೆಯಲ್ಲಿ ತೊಡಗಿದ್ದ ಅರ್ಜುನನ ಸ್ಮಾರಕ ಭಾವನಾತ್ಮಕ ತಾಣವಾಗಿ ರೂಪುಗೊಂಡಿದೆ. ಸ್ಮಾರಕ ವೀಕ್ಷಿಸಲು ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗುವುದು’ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಸಂಸದ ಶ್ರೇಯಸ್ ಪಟೇಲ್, ಶಾಸಕರಾದ ಕೆ.ಎಂ. ಶಿವಲಿಂಗೇಗೌಡ, ಸಿಮೆಂಟ್ ಮಂಜು, ಸಿಸಿಎಫ್ ಏಡುಕುಂಡಲ, ಡಿಸಿಎಫ್ ಸೌರಭ್ ಕುಮಾರ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-44-648969251

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.