ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂದಿನಿ ಉತ್ಪನ ಮಾರಾಟ ವೃದ್ಧಿ: ಗೋವಿಂದರಾಜು

ರಿಂಗ್ ರಸ್ತೆಯಲ್ಲಿ ಮಾರಾಟ ಮಳಿಗೆ ಉದ್ಘಾಟನೆ
Last Updated 7 ಫೆಬ್ರುವರಿ 2021, 13:48 IST
ಅಕ್ಷರ ಗಾತ್ರ

ಹಾಸನ: ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ಮಾರಾಟದಲ್ಲಿ ಸ್ವಲ್ಪ ಹಿನ್ನಡೆ ಅನುಭವಿಸಿದ್ದನ್ನು ಬಿಟ್ಟರೆ ಗ್ರಾಹಕರಿಂದ ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ ಎಂದು ಹಾಸನ ಹಾಲು ಒಕ್ಕೂಟದ ಮಾರುಕಟ್ಟೆ ವಿಭಾಗದ ಪ್ರಧಾನ ವ್ಯವಸ್ಥಾಪಕ ಗೋವಿಂದರಾಜು ಹೇಳಿದರು.

ನಗರದ ರಿಂಗ್ ರಸ್ತೆ, ವಿಶಾಲ್ ಮಾರ್ಟ್ ಪಕ್ಕದಲ್ಲಿ ಭಾನುವಾರ ನಂದಿನಿ ಹಾಲು ಮತ್ತು ಇತರೆ ಉತ್ಪನ್ನಗಳ ಮಾರಾಟ ಮಳಿಗೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆ ಒಳಗೊಂಡ ಒಕ್ಕೂಟದ ವಹಿವಾಟು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಹಾಸನ ಡೇರಿ ಆವರಣದಲ್ಲಿನ ಐಸ್‍ಕ್ರೀಂ ಘಟಕ ಕಾರ್ಯಾರಂಭ ಮಾಡಿದ್ದು, ಮಾರುಕಟ್ಟೆಯಲ್ಲಿ ನಂದಿನಿ ಐಸ್‍ಕ್ರೀಂಗೆ ಬೇಡಿಕೆ ಇದೆ ಎಂದು ವಿವರಿಸಿದರು.

ಹಾಸನ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಪ್ರಿಯರಂಜನ್ ಮಾತನಾಡಿ, ನಂದಿನಿ ಉತ್ಪನ್ನಗಳ ಮಾರುಕಟ್ಟೆಯ ವಿಸ್ತರಣೆ ನಿಟ್ಟಿನಲ್ಲಿ ಈಗ ನಂದಿನಿ ಉತ್ಪನ್ನಗಳ ಸುಸಜ್ಜಿತ ಮಾರಾಟಮಳಿಗೆ ಆರಂಭಿಸಲಾಗುತ್ತಿದೆ. ಈಗಾಗಲೇ 50 ಕ್ಕೂ ಹೆಚ್ಚು ಆಕರ್ಷಕ ಹಾಗೂ ಸುಸಜ್ಜಿತಮಾರಾಟ ಮಳಿಗೆ ಪ್ರಾರಂಭಿಸಿದ್ದು, ಹಾಸನ ಹಾಲು ಒಕ್ಕೂಟದ ಆಡಳಿತ ಕಚೇರಿ ಬಳಿ ಬಿ.ಎಂ.ರಸ್ತೆಗೆ ಹೊಂದಿಕೊಂಡಂತೆ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ನಂದಿನಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆ ಶೀಘ್ರದಲ್ಲಿಯೇ ಆರಂಭವಾಗಲಿದೆ ಎಂದು ತಿಳಿಸಿದರು.

ಪಶುಪಾಲನೆ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಡಾ.ಎಚ್.ಎಸ್.ಮೋಹನ್‍ದಾಸ್ ಅವರು
ಮಾರಾಟ ಮಳಿಗೆ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎಚ್.ಪಿ.ಸ್ವರೂಪ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT