ಮಂಗಳವಾರ, ಮಾರ್ಚ್ 2, 2021
19 °C

ಬೇಲೂರಿನಲ್ಲಿ 24ರಂದು ರಾಷ್ಟ್ರೀಯ ನೃತ್ಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೇಲೂರು: ‘36ನೇ ರಾಷ್ಟ್ರೀಯ ನೃತ್ಯೋತ್ಸವವನ್ನು ಜ. 24ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಕೋಟೆ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದೆ’ ಎಂದು ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿ ಕಾರ್ಯದರ್ಶಿ ಸ್ವಾತಿ ಪಿ.ಭಾರದ್ವಾಜ್ ಹೇಳಿದರು.

ಭಾರತೀಯ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನ ಹೊಂದಿರುವ 8 ಪ್ರಕಾರದ ಶಾಸ್ತ್ರೀಯ ನೃತ್ಯಗಳನ್ನು ಒಂದೆಡೆಗೆ ಸೇರಿಸಬೇಕು ಹಾಗೂ ಈ ಬಾರಿ ರಾಜ್ಯದ ಕಲಾವಿದರಿಗೆ ಅವಕಾಶ ಮಾಡಿಕೊಡಬೇಕು ಎಂಬ ಉದ್ದೇಶದಿಂದ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ಸುಮಾರು 60ಕ್ಕೂ ಹೆಚ್ಚು ಕಲಾವಿದರು ಈ ನೃತ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದು, ಶಾಸಕ ಕೆ.ಎಸ್.ಲಿಂಗೇಶ್ ಉದ್ಘಾಟಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿ ಅಧ್ಯಕ್ಷೆ ಕೆ.ಆರ್.ಅನಿತಾ, ಸಂಚಾಲಕ ಪ್ರಕಾಶ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು