ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ ಜಿಲ್ಲಾ ಪಂಚಾಯಿತಿಗೆ ರಾಷ್ಟ್ರೀಯ ಗೌರವ

ದೀನ್ ದಯಾಳ್ ಉಪಾಧ್ಯಾಯ ಪಂಚಾಯಿತಿ ಸಶಸ್ತ್ರಿಕರಣ ಪುರಸ್ಕಾರ
Last Updated 1 ಏಪ್ರಿಲ್ 2021, 13:25 IST
ಅಕ್ಷರ ಗಾತ್ರ

ಹಾಸನ: ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ದಿ ಇಲಾಖೆ ಪಂಚಾಯಿತಿಗಳ ಸಬಲೀಕರಣಕ್ಕೆ ನೀಡುವ ರಾಷ್ಟ್ರಪ್ರಶಸ್ತಿ ಹಾಸನ ಜಿಲ್ಲೆ ಆಯ್ಕೆಯಾಗಿದೆ.

ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳನ್ನು ಎಲ್ಲಾ ಸ್ವರೂಪಗಳಲ್ಲಿ ಸಶಕ್ತಗೊಳಿಸುವ ನಿಟ್ಟಿನಲ್ಲಿಕಾರ್ಯನಿರ್ವಹಿಸುವಲ್ಲಿ ಹಾಸನ ಜಿಲ್ಲಾ ಪಂಚಾಯಿತಿ ಅತ್ಯುತ್ತಮ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು ಗ್ರಾಮೀಣಾಭಿವೃದ್ದಿ ಇಲಾಖೆ ನೀಡುವ ದೀನ್ ದಯಾಳ್ ಉಪಾಧ್ಯಾಯ ಪಂಚಾಯಿತಿ ಸಶಸ್ತ್ರಿಕರಣ ಪುರಸ್ಕಾರಕ್ಕೆ ಪಾತ್ರವಾಗಿದೆ.

ಏ.24 ರಂದು ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಗ್ರಾಮ ಹಾಗೂ ತಾಲ್ಲೂಕು ಪಂಚಾಯಿತಿಗಳಲ್ಲಿ ಸರ್ಕಾರದ ವತಿಯಿಂದ ಬಿಡುಗಡೆಯಾದ ಅನುದಾನ ಹಾಗೂ ಅನುಷ್ಠಾನಗೊಂಡ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದೆ. ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ಸ್ವಚ್ಛ ನೈರ್ಮಲ್ಯ, ಶೌಚಾಲಯ ಇತರೆ ಮೂಲಭೂತ ಸೌಕರ್ಯಒದಗಿಸುವಲ್ಲಿ ಒತ್ತು ನೀಡಿರುವುದು ಸಹ ಪ್ರಶಸ್ತಿಗೆ ಪ್ರಮುಖ ಕಾರಣವಾಗಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಂಡಕ್ಕೆ ಮೀಸಲಿರಿಸಿದ ಸರ್ಕಾರದ ಸೌಲಭ್ಯ ಹಾಗೂ ಅನುದಾನವನ್ನು ಸಂಪೂರ್ಣವಾಗಿ ವಿನಿಯೋಗಿಸಿ, ಅವರ ಕಲ್ಯಾಣಕ್ಕೆ ಒತ್ತು ನೀಡಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚಿನ ಗ್ರಾಮ ಸಭೆ ನಡೆಸಿ, ಸ್ಥಳೀಯರು, ಮಹಿಳೆಯರು ಹಾಗೂ ಹಿರಿಯ ನಾಗರೀಕರ ಸಲಹೆ, ಸೂಚನೆ ಸ್ವೀಕರಿಸಿ ಗ್ರಾಮದ ಸಂಪೂರ್ಣ ಅಭಿವೃದ್ದಿ ಪ್ರಾಮುಖ್ಯತೆ ನೀಡಲಾಗಿರುವ ಅಂಶಗಳನ್ನು ಪುರಸ್ಕಾರಕ್ಕೆ ಆಯ್ಕೆ ಸಂದರ್ಭದಲ್ಲಿ ಪರಿಗಣಿಸಲಾಗಿದೆ.

ಜಿಲ್ಲೆಯ ಶಾಲೆಗಳಲ್ಲಿ ಮೂಲಭೂತ ಸೌಕರ್ಯ, ಶಾಲಾ ಮಕ್ಕಳಿಗೆ ಗ್ರಂಥಾಲಯ, ಆಟದ ಮೈದಾನ, ಕುಡಿಯುವ ನೀರಿನ ವ್ಯವಸ್ಥೆ, ಉತ್ತಮ ಶೌಚಾಲಯ ಸೌಲಭ್ಯ ಕಲ್ಪಿಸಿಕೊಟ್ಟು ಪರಿಣತ ಶಿಕ್ಷಕರನ್ನು ಒದಗಿಸಿ ಹೆಚ್ಚಿನ ಮಕ್ಕಳನ್ನು ಸರ್ಕಾರಿ ಶಾಲೆಗಳ ಕಡೆ ಆಕರ್ಷಿತರನ್ನಾಗಿ ಮಾಡುತ್ತಿರುವುದು ಕೂಡ ಗಮನಾರ್ಹ ಅಂಶವಾಗಿದೆ.

ಸ್ವಚ್ಚ ಭಾರತ ಅಭಿಯಾನವನ್ನು ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿ ಸ್ವಚ್ವತೆಯನ್ನು ಕಾಪಾಡಲುಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿರುವುದು ಸಹ ಈ ಪ್ರಶಸ್ತಿ ಗಳಿಸಲು ಸಹಕರಿಯಾಗಿದೆ.

ಜಿಲ್ಲಾ ಪಂಚಾಯಿತಿ ವತಿಯಿಂದ ಸಾರ್ವಜನಿಕರ 863 ಅರ್ಜಿಗಳನ್ನು ಹಾಗೂ ಆರ್.ಟಿ.ಐ ಅಡಿ ಬಂದ ಅರ್ಜಿಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿರುವುದರ ಜೊತೆಗೆ ಎಲ್ಲಾ ಯೋಜನೆಗಳ ಅನುಷ್ಠಾನದ ಬಗ್ಗೆ ಮಾಹಿತಿಯನ್ನು ಸರ್ಕಾರಕ್ಕೆ ಸಕಾಲದಲ್ಲಿ ಒದಗಿಸಿರುವುದು ಉತ್ತಮಕಾರ್ಯನಿರ್ವಹಣೆಯಾಗಿದೆ.

ಇದೇ ರೀತಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕು, ಬೆಂಗಳೂರು ನಗರ ವ್ಯಾಪ್ತಿಯ ಬೆಂಗಳೂರು ಪೂರ್ವ ವಿಭಾಗ, ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲ್ಲೂಕಿನ ತುಮ್ಮಿನಕಟ್ಟೆ ಗ್ರಾಮ ಪಂಚಾಯಿತಿ, ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಯಡಗನಹಳ್ಳಿ ಗ್ರಾಮ ಪಂಚಾಯಿತಿ, ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಕರಣಕುಪ್ಪೆ ಗ್ರಾಮ ಪಂಚಾಯಿತಿ ವಿವಿಧ ಪ್ರಶಸ್ತಿಗೆ ಆಯ್ಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT