ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್ಎಂಎಂಎಸ್ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Published 30 ಮೇ 2024, 12:57 IST
Last Updated 30 ಮೇ 2024, 12:57 IST
ಅಕ್ಷರ ಗಾತ್ರ

ಹಳೇಬೀಡು: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ 8ನೇ ತರಗತಿಯ ನಾಲ್ಕು ವಿದ್ಯಾರ್ಥಿಗಳು ಎನ್ಎಂಎಂಎಸ್ (ನ್ಯಾಷನಲ್ ಮೀನ್ಸ್ ಕಮ್ ಮೇರಿಟ್) ಪರೀಕ್ಷೆಯಲ್ಲಿ ಉತ್ತಿರ್ಣರಾಗಿದ್ದು, ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಾದ ಜೇನುಶ್ರೀ, ಶಿಲ್ಪಾ, ಸೇವಂತ್ ಹಾಗೂ ಪ್ರತೀಕ್ಷಾ ಪರೀಕ್ಷೆಯಲ್ಲಿ ಯಶಸ್ಸುಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ಇವರು 4 ವರ್ಷದ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ. ಪರೀಕ್ಷೆಯಲ್ಲಿ ಪಾಸದ ವಿದ್ಯಾರ್ಥಿ ವಾರ್ಷಿಕ ₹12,000 ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ ಪಡೆದಿದ್ದಾರೆ.

ಬೇಲೂರು ತಾಲ್ಲೂಕಿನಲ್ಲಿ ಹಳೇಬೀಡಿನ ಕೆಪಿಎಸ್ ಪ್ರೌಢಶಾಲೆ ಎರಡನೇ ಸ್ಥಾನ ಪಡೆದುಕೊಂಡಿದೆ. ಗಣಿತ ಶಿಕ್ಷಕ ಎಚ್.ಎಂ.ಮನೋಜ್ ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

‘ಕೆಪಿಎಸ್ ಶಾಲೆಯ ವಿದ್ಯಾರ್ಥಿಗಳು ಎನ್ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು ಸಂತಸ ತಂದಿದೆ. ಗಣಿತ ಶಿಕ್ಷಕ ಎಚ್.ಎಂ.ಮನೋಜ್ ಶ್ರಮವಹಿಸಿ ಬೋಧನೆ ಮಾಡಿದ್ದರಿಂದ ಮಕ್ಕಳು ಸಾಧನೆಯತ್ತ ಹೆಜ್ಜೆ ಹಾಕಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಹೆಚ್ಚಿನ ವಿದ್ಯಾರ್ಥಿಗಳು ಎನ್ಎಂಎಂಎಸ್ ಪರೀಕ್ಷೆಯಲ್ಲಿ ಉತ್ತಿರ್ಣರಾಗುವಂತೆ ಪ್ರೇರಿಪಿಸಲಾಗುವುದು’ ಎಂದು ಉಪಪ್ರಾಂಶುಪಾಲ ಮುಳ್ಳಯ್ಯ ತಿಳಿಸಿದರು.

ಎನ್.ಪಿ.ಪ್ರತಿಕ್ಷಾ
ಎನ್.ಪಿ.ಪ್ರತಿಕ್ಷಾ
ಎಂ.ಕೆ.ಸೇವಂತ್
ಎಂ.ಕೆ.ಸೇವಂತ್
ಎನ್.ಸಿ.ಶಿಲ್ಪಾ
ಎನ್.ಸಿ.ಶಿಲ್ಪಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT