ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಮಂಜು ಪೆನ್‌ಡ್ರೈವ್‌ ಹಂಚಿರಬಹುದು: ನವೀನ್‌ಗೌಡ

ಸಂಚಲನ ಮೂಡಿಸಿದ ಫೇಸ್‌ಬುಕ್‌ ಪೋಸ್ಟ್‌
Published 12 ಮೇ 2024, 18:53 IST
Last Updated 12 ಮೇ 2024, 18:53 IST
ಅಕ್ಷರ ಗಾತ್ರ

ಹಾಸನ: ಪೆನ್ ಡ್ರೈವ್ ಹಂಚಿಕೆಯ ಆರೋಪ ಹೊತ್ತಿರುವ ನವೀನ್‌ ಗೌಡ, ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದು, ‘ಅರಕಲಗೂಡು ಶಾಸಕ ಎ.ಮಂಜು ಅವರೇ ಪೆನ್‌ಡ್ರೈವ್ ಹಂಚಿಕೆ ಮಾಡಿರಬಹುದು. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳುತ್ತಿರುವ ಮಹಾ ನಾಯಕ ಇವರೇ’ ಎಂದು ಆರೋಪಿಸಿದ್ದಾನೆ.

‘ಏಪ್ರಿಲ್ 20 ರಂದು ನನಗೆ ರಸ್ತೆಯಲ್ಲಿ ಸಿಕ್ಕ ಪೆನ್ ಡ್ರೈವ್ ಅನ್ನು ಎ.ಮಂಜು ಅವರಿಗೆ ಏಪ್ರಿಲ್ 21 ರಂದು ಅರಕಲಗೂಡಿನ ಮಾರುತಿ ಕಲ್ಯಾಣ ಮಂಟಪದಲ್ಲಿ ನೀಡಿದ್ದೇನೆ. ವಿಡಿಯೊವನ್ನು ವೈರಲ್ ಮಾಡಿದ್ದರ ಹಿಂದೆ ಮಹಾ ನಾಯಕನ ಕೈವಾಡ ಇದೆ ಎಂದು ಮಾಜಿ ಸಿ.ಎಂ. ಎಚ್.ಡಿ. ಕುಮಾರಸ್ವಾಮಿ ಹೇಳಿದ್ದರು. ಆ ಮಹಾನಾಯಕ ಅರಕಲಗೂಡು ಶಾಸಕರೇ ಇರಬಹುದು’ ಎಂದು ಪೋಸ್ಟ್ ಮಾಡಿದ್ದಾನೆ.

ಪೆನ್‌ಡ್ರೈವ್‌ ಹಂಚಿಕೆ ಸಂಬಂಧ ಸೈಬರ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನವೀನ್‌ಗೌಡ ಆರೋಪಿಯಾಗಿದ್ದು, ಸದ್ಯಕ್ಕೆ ತಲೆಮರೆಸಿಕೊಂಡಿದ್ದಾನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT