ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ತಡೆಗೆ ಅಗತ್ಯ ಕ್ರಮ: ಡಿ.ಸಿ ಆರ್. ಗಿರೀಶ್

ಶಿಕ್ಷಕರ ನೇಮಕಾತಿ: ನಾಲ್ಕು ಕೇಂದ್ರಗಳಲ್ಲಿ ಪರೀಕ್ಷೆ: ವಿವಿಧ ಇಲಾಖೆ ಅಧಿಕಾರಿಗಳ ಸಭೆ
Last Updated 18 ಮೇ 2022, 4:43 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಮೇ 21 ಮತ್ತು 22ರಂದು ನಡೆಯುವ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಯನ್ನು ಅತ್ಯಂತ ಸುವ್ಯವಸ್ಥೆ ಹಾಗೂ ಅಕ್ರಮಗಳು ನಡೆಯದಂತೆ ನಡೆಸುವ ಕುರಿತು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ವಿವಿಧ ಅಧಿಕಾರಿಗಳ ಸಭೆ ನಡೆಸಿ ಹಲವು, ಸೂಚನೆ ನೀಡಿದರು.

ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಗಿರೀಶ್, ಜಿಲ್ಲೆಯಲ್ಲಿ 1,100 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ನಗರದ ನಾಲ್ಕು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಶಿಕ್ಷಣ ಇಲಾಖೆ ಹಾಗೂ ಪೋಲಿಸ್ ಇಲಾಖೆ ಪರಸ್ಪರ ಸಹಕಾರದಿಂದ ತಂಡಗಳನ್ನು ರೂಪಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದರು.

ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಿಗೆ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಅಳವಡಿಸಬೇಕು. ನಾಲ್ಕು ಪರೀಕ್ಷಾ ಕೇಂದ್ರಗಳಿಗೆ 2 ಮಾರ್ಗ ರಚಿಸಲಾಗಿದ್ದು, ಪ್ರತಿ ಮಾರ್ಗಕ್ಕೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ದರ್ಜೆಯ ಅಧಿಕಾರಿಗಳನ್ನು ಮಾರ್ಗಾಧಿಕಾರಿ ಯನ್ನಾಗಿ ನೇಮಿಸಲಾಗಿದೆ ಹಾಗೂ ಕೊಠಡಿ ಮೇಲ್ವಿಚಾರಕರಾಗಿ ಸರ್ಕಾರಿ ಶಾಲಾ ಶಿಕ್ಷಕರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೂ ಮೆಟಲ್ ಡಿಟೆಕ್ಟರ್‌ ಅಳವಡಿಸಿ, ಪರೀಕ್ಷಾ ಕೇಂದ್ರದ ಕನಿಷ್ಠ200 ಮೀಟರ್ ವ್ಯಾಪ್ತಿಯೊಳಗೆ ನಿಷೇಧಾಜ್ಞೆ ಜಾರಿಗೊಳಿಸಬೇಕು. ಅಕ್ರಮ ನಡೆಯದಂತೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ 2 ಹಂತದಲ್ಲಿ ತಪಾಸಣೆ ಕೈಗೊಳ್ಳಬೇಕು ಎಂದರು.

ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೂ ಆರು ಅರೆ ವೈದ್ಯಕೀಯ ಸಿಬ್ಬಂದಿ ನಿಯೋಜಿಸುವುದು ಹಾಗೂ ಪರೀಕ್ಷಾ ಅಭ್ಯರ್ಥಿಗಳಿಗೆ ಮಾಸ್ಕ್ ವಿತರಿಸುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕಾಂತರಾಜು ಮಾತನಾಡಿ, ಪರೀಕ್ಷೆ ಯನ್ನು ಕಟ್ಟುನಿಟ್ಟಾಗಿ ಗಮನಿಸಿ ಪಾರದರ್ಶಕ ವಾಗಿ ನಡೆಸಬೇಕು. ಕಡ್ಡಾಯ ವಾಗಿಸಿಸಿಟಿವಿ ಕ್ಯಾಮೆರಾ ಕಾರ್ಯ ನಿರ್ವಹಿಸುತ್ತಿರುವುದನ್ನು ಖಾತರಿ ಪಡಿಸಿಕೊಂಡು ಪರೀಕ್ಷೆ ಮುಗಿಯುವವರೆಗೂ ಪರಿಶೀಲಿಸಬೇಕು. ಯಾವುದೇ ಲೋಪ ದೋಷಗಳಿಗೆ ಅವಕಾಶ ನೀಡ ಬಾರದು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪೊಲೀಸ್‌ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ ಮಾತನಾಡಿ,ಎಲೆಕ್ಟ್ರಾನಿಕ್ ವಸ್ತುಗಳನ್ನು ಅಭ್ಯರ್ಥಿಗಳು ತರದಂತೆ ಸೂಚನೆ ನೀಡಲಾಗುವುದು.

ಪ್ರತಿ ಪರೀಕ್ಷಾ ಕೇಂದ್ರಕ್ಕೂ ಮಹಿಳಾ ಮತ್ತು ಪುರುಷ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗುವುದು ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ. ಡಿವೈಎಸ್‌ಪಿ ಉದಯಭಾಸ್ಕರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಎಸ್. ಪ್ರಕಾಶ್, ನೋಡಲ್ ಅಧಿಕಾರಿ ಶಿವರಾಜು, ಅಭಿವೃದ್ಧಿ ವಿಭಾಗದ ಉಪನಿರ್ದೇಶಕಿಪುಷ್ಪಲತಾ ಎಚ್. ಕೆ., ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT