ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ಮೇಕೆದಾಟು ಹೋರಾಟಕ್ಕೆ ಪಕ್ಷಾತೀತ ಬೆಂಬಲ ಅಗತ್ಯ –ಡಿ.ಕೆ. ಶಿವಕುಮಾರ್‌

ಜ. 9ರಿಂದ ಪಾದಯಾತ್ರೆ ಆರಂಭ
Last Updated 25 ಡಿಸೆಂಬರ್ 2021, 15:41 IST
ಅಕ್ಷರ ಗಾತ್ರ

ಹಾಸನ: ‘ಕಾವೇರಿ ಕೊಳ್ಳದ ಜನರ ಬವಣೆ ಹಾಗೂ ಬೆಂಗಳೂರು ಜನರ ಕುಡಿಯುವ ನೀರಿನ ಸಮಸ್ಯೆ ನೀಗಬೇಕಾದರೆ ಮೇಕೆದಾಟು ಯೋಜನೆ ಆಗಬೇಕು. ಅದಕ್ಕಾಗಿ ಜ. 9ರಿಂದ 19ರವರೆಗೆಹಮ್ಮಿಕೊಂಡಿರುವ ಪಾದಯಾತ್ರೆಗೆ ಎಲ್ಲ ಪಕ್ಷಗಳ ಮುಖಂಡರು, ಸಂಘಟನೆಗಳು,ಸಿನಿಮಾರಂಗ ಸೇರಿ ಎಲ್ಲರೂ ಬೆಂಬಲ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.

ಮೇಕೆದಾಟು ಬಳಿ ಅಣೆಕಟ್ಟು ಕಟ್ಟಲು ಸಿದ್ದರಾಮಯ್ಯ ಅವಧಿಯಲ್ಲಿ ಡಿಪಿಆರ್ ಆಗಿತ್ತು. ಇದಕ್ಕೆಕೇಂದ್ರ ‘ಅನುಮತಿ ನೀಡಿದೆ. ಆದರೆ, ಪರಿಸರ ಇಲಾಖೆಯಿಂದ ನೀರಾಕ್ಷೇಪಣಾ ಪತ್ರ ಸಿಕ್ಕರೆಕಾಮಗಾರಿ ಆರಂಭವಾಗಲಿದೆ. ಇದನ್ನು ಕೊಡಿಸಲು ರಾಜ್ಯ ಸರ್ಕಾರ ಪ್ರಯತ್ನ ಮಾಡುತ್ತಿಲ್ಲ.ಹಾಗಾಗಿ ಕಾಂಗ್ರೆಸ್‌ ಮುಂದಾಳತ್ವದಲ್ಲಿ ಹೋರಾಟ ನಡೆಯಲಿದೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಕೇಂದ್ರಕ್ಕೆ ಮನವರಿಕೆ ಮಾಡುವ ಕೆಲಸ ರಾಜ್ಯ ಸರ್ಕಾರ ಮಾಡಲಿಲ್ಲ. ಇದು ಒಂದು ದಿನದಲ್ಲಿ ಬಗೆಹರಿಸುವ ಸಮಸ್ಯೆ. ಈ ಯೋಜನೆಯಿಂದ ತಮಿಳುನಾಡಿಗೆ ಲಾಭವೇ ಹೊರತುನಷ್ಟವಾಗುವುದಿಲ್ಲ. ತಮಿಳುನಾಡಿನ ಒಂದು ಇಂಚು ಭೂಮಿ ಮತ್ತು ಒಂದು ರೂಪಾಯಿ ಹಣಬೇಕಾಗಿಲ್ಲ. ನೆಲ, ಜಲ, ಭಾಷೆವಿಚಾರದಲ್ಲಿ ಎಲ್ಲರೂ ಸಹಕಾರ ನೀಡಿದ್ದಾರೆ. ಪಾದಯಾತ್ರೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಮೂಲಕ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಭಾಗವಹಿಸಿದವರಿಗೆ ಪ್ರಮಾಣ ಪತ್ರ ನೀಡಲಾಗುವುದು’ ಎಂದರು.

ಮೇಕೆದಾಟು ಯೋಜನೆ ಹೋರಾಟವನ್ನು ಡಿಕೆಶಿ ಹೈಜಾಕ್ ಮಾಡಿದ್ದಾರೆ ಎಂಬಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್‌, ‘ಅವರು ಬಹಳದೊಡ್ಡವರು, ಯಾವಾಗ ಹೋರಾಟ ಮಾಡಿದರೋ ಗೊತ್ತಿಲ್ಲ. ಹೋರಾಟ ಮಾಡಬೇಕೆಂದುಅವರ ಮನಸ್ಸಿನಲ್ಲಿ ಇತ್ತಂತೆ’ ಎಂದರು.

ವಿಧಾನ ಪರಿಷತ್‌ನಲ್ಲಿ ನಡೆದ ಗಲಾಟೆಯಿಂದ ಮನನೊಂದು ಸ್ಪೀಕರ್‌ ಬಸವರಾಜ ಹೊರಟ್ಟಿರಾಜೀನಾಮೆಗೆ ಮುಂದಾಗಿದ್ದ ವಿಚಾರಕ್ಕೆ ಉತ್ತರಿಸಿದ ಅವರು, ‘ಹೊರಟ್ಟಿ ಅವರುರಾಜಕೀಯಕ್ಕಾಗಿ ಏನು ಮಾಡಿದರೂ ಸ್ವಾಗತ’ ಎಂದು ಮಾರ್ಮಿಕವಾಗಿ ನುಡಿದರು.

‘ಸರ್ಕಾರ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ತರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ನಾವು ಹೇಳಬೇಕಾಗಿದ್ದನ್ನು, ಚರ್ಚೆ ಮಾಡಬೇಕಾಗಿದ್ದನ್ನು ಮಾಡಿದ್ದೇವೆ. ರಾಜಕೀಯಉದ್ದೇಶದಿಂದ ಕಾಯ್ದೆ ತರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಿಲುವು ತಿಳಿಸಿರುವುದರಿಂದ ಈ ಬಗ್ಗೆಹೆಚ್ಚು ಮಾತನಾಡುವುದಿಲ್ಲ’ ಎಂದು ಉತ್ತರಿಸಿದರು.

ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನವನ್ನು ಆರಂಭಿಸಲಾಗಿದ್ದು, ಆನ್‌ಲೈನ್ ಮತ್ತುಆಫ್‌ಲೈನ್ ಮೂಲಕ ನಡೆಯಲಿದೆ. ಒಂದು ಕ್ಷೇತ್ರದಿಂದ ಕನಿಷ್ಠ 25 ಸಾವಿರ ಸದಸ್ಯತ್ವಮಾಡಿಸಲು ಸೂಚಿಸಲಾಗಿದೆ ಎಂದರು.

ಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ಜಾವಗಲ್ ಮಂಜುನಾಥ್‌, ಮುಖಂಡರಾದ ಕೃಷ್ಣಕುಮಾರ್‌, ಎಚ್‌.ಕೆ.ಜವರೇಗೌಡ, ಸಿ.ವಿ.ರಾಜಪ್ಪ, ಎಂ.ಶಂಕರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT