ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನೌಕರರ ಜೊತೆ ಮಾತುಕತೆ ನಡೆಸಿ

ರಾಜ್ಯ ಸರ್ಕಾರಕ್ಕೆ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್‌ ಒತ್ತಾಯ
Last Updated 20 ಏಪ್ರಿಲ್ 2021, 11:44 IST
ಅಕ್ಷರ ಗಾತ್ರ

ಹಾಸನ: ರಾಜ್ಯ ಸರ್ಕಾರ ಹಠಮಾರಿ ಧೋರಣೆ ಬಿಟ್ಟು ಮುಷ್ಕರ ನಿರತ ಸಾರಿಗೆ ಸಂಸ್ಥೆ ನೌಕರರ ಜೊತೆ ಕೂಡಲೇ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸಬೇಕು ಎಂದು ಸಿಐಟಿಯು ಜಿಲ್ಲಾಧ್ಯಕ್ಷಧರ್ಮೇಶ್‌ ಒತ್ತಾಯಿಸಿದರು.

ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಾವಿರಾರು
ನೌಕರರನ್ನು ಕೆಲಸದಿಂದ ವಜಾ, ಅಮಾನತ್ತು ಮತ್ತು ವರ್ಗಾವಣೆ ಮಾಡುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿ ಪರಿಹಾರ ಮಾಡಲು ಸಾಧ್ಯವಿರುವ ದಾರಿಗಳನ್ನು ಹುಡುಕುವ ಬದಲು, ಕಾರ್ಮಿಕರನ್ನು ಬಲಿಪಶುಗಳನ್ನಾಗಿ ಮಾಡುವ ಕ್ರಮ ಖಂಡನೀಯ. ಸಾರಿಗೆ ಕಾರ್ಮಿಕರಮೇಲಿನ ದಮನ ಮತ್ತು ದಾಳಿಗಳನ್ನು ಬಿಟ್ಟು ಸೌಹಾರ್ದಯುತವಾಗಿ ಸಮಸ್ಯೆಯನ್ನು ಸರ್ಕಾರ ಮತ್ತುಆಡಳಿತ ವರ್ಗ ಇತ್ಯರ್ಥ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

ನೌಕರರು ಯಾವುದೇ ಕಠಿಣ ಸಂದರ್ಭಗಳಲ್ಲೂ ರಾಜ್ಯದ ಕೋಟ್ಯಂತರ ಜನರಿಗೆ ಸಾರಿಗೆ ಸೇವೆ ಒದಗಿಸುತ್ತಿದ್ದಾರೆ. ಇಡೀ ದೇಶದಲ್ಲೇ ಅತ್ಯಂತ ಪ್ರಬಲವಾದ ಸಾರ್ವಜನಿಕ ಸಾರಿಗೆ ಜಾಲವನ್ನು ಹೊಂದಿರುವ ಸಾರಿಗೆ ನಿಗಮಗಳ ಕಾರ್ಮಿಕರ ಒಟ್ಟಾರೆಶ್ರಮದಿಂದ ನೂರಾರು ಪ್ರಶಸ್ತಿಗಳನ್ನು ಗಳಿಸಲು ಸಾಧ್ಯವಾಗಿದೆ. ಈ ಬಗ್ಗೆ ಎಲ್ಲಾ ಸಾರಿಗೆ
ಕಾರ್ಮಿಕರಿಗೂ ಹೆಮ್ಮೆಯಿದೆ. ಇದನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾರಿಗೆ ಕಾರ್ಮಿಕರು ಬದ್ಧರಾಗಿದ್ದಾರೆ ಎಂದರು.

ಮಾರ್ಚ್ ತಿಂಗಳ ವೇತನ ತಡೆಹಿಡಿದಿರುವ ಆಡಳಿತ ವರ್ಗದ ಕ್ರಮ ಸರಿಯಲ್ಲ. ಕೂಡಲೇ ಕಾರ್ಮಿಕರಿಗೆ ವೇತನ ನೀಡಬೇಕು. ನೌಕರರ ವರ್ಗಾವಣೆಯನ್ನು ಸರ್ಕಾರ ತಕ್ಷಣವೇ ರದ್ದು ಮಾಡಬೇಕು. ಅಮಾನತ್ತುಗೊಂಡಿರುವ ನೌಕರರನ್ನು ಅದೇ ಸ್ಥಾನಕ್ಕೆ ಮರು ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಸಿಐಟಿಯು ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪ, ಸಾರಿಗೆ ನಿಗಮಗಳ ನೌಕರರ ಫ಼ೆಡರೇಷನ್ ಹಾಗೂ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಎಚ್.ಎಸ್. ಮಂಜುನಾಥ್, ಉಪಾಧ್ಯಕ್ಷಸುರೇಶ್‌, ಖಜಾಂಚಿ ಗಣೇಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT