ನಿಷ್ಪಕ್ಷಪಾತ ಚುನಾವಣೆ ನಡೆಸಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ

7

ನಿಷ್ಪಕ್ಷಪಾತ ಚುನಾವಣೆ ನಡೆಸಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ

Published:
Updated:
Deccan Herald

ಹಾಸನ : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಯಾವುದೇ ಗೊಂದಲಗಳಿಲ್ಲದಂತೆ ನಿಷ್ಪಕ್ಷಪಾತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಗರಸಭೆ, ಪುರಸಭೆ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಪ್ರತಿಯೊಂದು ಚುನಾವಣೆಯೂ ಅತ್ಯಂತ ಪ್ರಮುಖವಾಗಿರುತ್ತದೆ. ನಿರ್ಲಕ್ಷ್ಯ ತೋರದೆ ಜವಾಬ್ದಾರಿಯಿಂದ ನಡೆಸಬೇಕು. ನಾಮಪತ್ರಗಳ ಸ್ವೀಕಾರ, ಪರಿಶೀಲನೆ, ಜಾತಿ ಪ್ರಮಾಣ ಪತ್ರಗಳನ್ನು ಗಮನಿಸುವುದು, ಚಿಹ್ನೆ ನೀಡುವ ವಿಚಾರವನ್ನು ಅತ್ಯಂತ ಎಚ್ಚರಿಕೆಯಿಂದ ಮಾಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಕ್ಷೇತ್ರ ಮೀಸಲಾತಿ ಪ್ರಕಟ ಹಾಗೂ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಚುನಾವಣೆ ನಡೆಸುವಂತೆ ಸೂಚನೆ ನೀಡಿದರು.

ಆ. 10 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುವುದು. ಆ.17 ರಂದು ನಾಮಪತ್ರ ಸ್ವೀಕರಿಸಲು ಕಡೆ ದಿನ. 18ರಂದು ನಾಮಪತ್ರ ಪರಿಶೀಲನೆ, 20 ರಂದು ಉಮೇದುವಾರಿಕೆ ಹಿಂತೆಗೆದುಕೊಳುವುದು. 29ರಂದು ಮತದಾನ ನಡೆಯಲಿದೆ. ಅಗತ್ಯವಿದ್ದಲ್ಲಿ 31ರಂದು ಮರು ಮತದಾನ. ಸೆ. 1 ರಂದು ಬೆಳಿಗ್ಗೆ 8 ರಿಂದ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತದಾನ ನಡೆಯಲಿದೆ ಎಂದು ಹೇಳಿದರು.

ಅಚ್ಚುಕಟ್ಟಾದ ಚುನಾವಣೆ ನಡಸಲು ಎಲ್ಲಾ ರೀತಿಯ ಸಹಕಾರ ಜಿಲ್ಲಾಡಳಿತ ನೀಡಲಿದೆ. ಯಾವುದೇ ಲೋಪ, ಗೊಂದಲಗಳಿಲ್ಲದಂತೆ ಚುನಾವಣೆ ನಡೆಸಬೇಕು. ಉಪವಿಭಾಗಾಧಿಕಾರಿ ಎಚ್‌.ಎಲ್‌. ನಾಗರಾಜ್ ಚುನಾವಣೆಗೆ ಸಂಬಂಧಿಸಿದಂತೆ ಹಲವು ಸಲಹೆ ನೀಡಿದರು.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ಹಸಿರು ಕರ್ನಾಟಕ ಯೋಜನೆಯಡಿ ಆ. 15 ರಿಂದ 18ರ ವರೆಗೆ ವಿಶೇಷ ವನ ಮಹೋತ್ಸವ ಮತ್ತು ಉಚಿತ ಸಸಿ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಮಂ ಬಾಬು ಮಾತನಾಡಿ, ಜಿಲ್ಲೆಯಲ್ಲಿ 60 ಸಾವಿರ ಸಸಿಗಳನ್ನು ಸಾರ್ವಜನಿಕರಿಗೆ ವಿತರಿಸಲಾಗುವುದು. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಹಂಚಿಕೆ ಮಾಡಲಾಗುವುದು ಎಂದರು.

ಬಾದಮಿ ಕಾಡು, ಹೊಂಗೆ, ಹಲಸು, ನೇರಳೆ ಹೆಬ್ಬೇವು ಹಾಗೂ ಇತರೆ ಸಸಿಗಳನ್ನು ವಿತರಿಸಲಾಗುವುದು. ಆ. 15ರಂದು ಬಲೂನು ಹಾರಾಟ, ಸಸಿ ನೆಡುವುದು, ಸಸಿ ವಿತರಣೆ ಹಾಗೂ ಹಸಿರು ಪ್ರಮಾಣವಚನ ಸ್ವೀಕಾರ ನಡೆಯಲಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಜಿ. ಜಗದೀಶ್ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಹಸಿರು ಕರ್ನಾಟಕ ಯೋಜನೆಯಡಿ ಭೂಮಿ ಕಾಯಕ್ರಮವನ್ನು ಯಶಸ್ವಿಗಾಗಿ ಸಂಘಟಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಬೇಡಿಕೆಗೆ ಅನುಗುಣವಾಗಿ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಕನಿಷ್ಠ 1000 ಸಸಿಗಳನ್ನು ಸರಬರಾಜು ಮಾಡಲು ಸೂಚಿಸಿದರು.

ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವೆಂಕಟೇಶಪ್ಪ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸಂಜಯ್, ಸಮಾಜ ಕಲ್ಯಾಣಾಧಿಕಾರಿ ಶ್ರೀಧರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !