ನಿಗಮ, ಮಂಡಳಿ ನೇಮಕದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಎಚ್‌.ಡಿ.ರೇವಣ್ಣ ಸ್ಪಷ್ಟನೆ

7
ಲೋಕೋಪಯೋಗಿ ಸಚಿವ

ನಿಗಮ, ಮಂಡಳಿ ನೇಮಕದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಎಚ್‌.ಡಿ.ರೇವಣ್ಣ ಸ್ಪಷ್ಟನೆ

Published:
Updated:
Prajavani

ಹಾಸನ: ‘ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಸಂಬಂಧ ಕೆಲ ಶಾಸಕರ ಆಯ್ಕೆಯನ್ನು ತಡೆಹಿಡಿದಿರುವ ಬಗ್ಗೆ ಮಾಹಿತಿ ಇಲ್ಲ. ಯಾವುದೇ ನಿಗಮ, ಮಂಡಳಿ ನೇಮಕದಲ್ಲಿ ಹಸ್ತಕ್ಷೇಪ ಮಾಡಿಲ್ಲ’ ಎಂದು ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟಪಡಿಸಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈ ಬಗ್ಗೆ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ತೀರ್ಮಾನ ಕೈಗೊಳ್ಳಲಿದ್ದಾರೆ. ಯಾವುದೇ ಖಾತೆಯಲ್ಲಿ ಮೂಗು ತೂರಿಸಿಲ್ಲ. ಹಾಗೇನಾದರೂ ಇದ್ದರೆ ಕಾಂಗ್ರೆಸ್ ಹೈಕಮಾಂಡ್ ಅಥವಾ ರಾಜ್ಯ ನಾಯಕರು ಕರೆದು ಕೇಳಿದರೆ ವಿವರಣೆ ನೀಡುವೆ’ ಎಂದು ತಿಳಿಸಿದರು.

ನಿಗಮ ಮಂಡಳಿ ನೇಮಕ ಬಗ್ಗೆ ದೇವೇಗೌಡರು, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮೊದಲಾದವರು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಸಚಿವ ಪುಟ್ಟರಂಗಶೆಟ್ಟಿ ವಿರುದ್ಧ ಕೇಳಿ ಬಂದಿರುವ ಹಣ ಸಾಗಣೆ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ ರೇವಣ್ಣ, ‘ಅವರೊಬ್ಬ ಹಿಂದುಳಿದ ವರ್ಗದ ನಾಯಕ. ಪ್ರಾಮಾಣಿಕ ಹಾಗೂ ಒಳ್ಳೆಯ ವ್ಯಕ್ತಿ. ವಿಧಾನಸೌಧದಲ್ಲಿ ಸಿಕ್ಕ ಹಣಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲ. ಇದರ ಹಿಂದೆ ಷಡ್ಯಂತ್ರ ಅಡಗಿದೆ. ಯಾರೋ ಒಬ್ಬರು ಹಣದ ಚೀಲ ತಂದಿಟ್ಟು ಸಚಿವರ ಹೆಸರು ಹೇಳಿದರೆ ಅದಕ್ಕೆ ಅವರೇಕೆ ಹೊಣೆಯಾಗುತ್ತಾರೆ’ ಎನ್ನುವ ಮೂಲಕ ಪುಟ್ಟರಂಗಶೆಟ್ಟಿ ಪರ ಬ್ಯಾಟಿಂಗ್ ಮಾಡಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !