ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಹಾಸನದಲ್ಲಿ ಬಸ್‌ ಇಲ್ಲದೆ ಪರದಾಟ: ವಿದ್ಯಾರ್ಥಿಗಳಿಂದ ಪ್ರತಿಭಟನೆ

Published 23 ಫೆಬ್ರುವರಿ 2024, 15:03 IST
Last Updated 23 ಫೆಬ್ರುವರಿ 2024, 15:03 IST
ಅಕ್ಷರ ಗಾತ್ರ

ಹಾಸನ ಜಿಲ್ಲೆಯ ಬೇಲೂರಿನಿಂದ ಚಿಕ್ಕಮಗಳೂರಿಗೆ ನಿತ್ಯ ಕೆಎಸ್‌ಆರ್‌ಟಿಸಿ ಬಸ್‌ಗಾಗಿ ಪರದಾಡುತ್ತಿರುವ ವಿದ್ಯಾರ್ಥಿಗಳು, ನೌಕರರು ಶುಕ್ರವಾರ ಬೇಲೂರು ಬಸ್ ನಿಲ್ದಾಣದಲ್ಲಿ ಸುಮಾರು ಒಂದೂವರೆ ಗಂಟೆ ಬಸ್ ತಡೆದು ಪ್ರತಿಭಟನೆ ನಡೆಸಿದರು. ಬಸ್ ತೊಂದರೆ ಇದ್ದು, ಪರೀಕ್ಷಾ ಸಮಯದಲ್ಲಿ ನಮಗೆ ಹೆಚ್ಚುವರಿಯಾಗಿ ಇಲ್ಲವೇ ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ಈ ಮೊದಲೇ ಮನವಿ ಮಾಡಲಾಗಿತ್ತು. ಅಧಿಕಾರಿಗಳೂ ನಮ್ಮ ಪರದಾಟವನ್ನು ನೋಡುತ್ತಲೇ ಇದ್ದಾರೆ. ಆದರೂ ಮೂಕಪ್ರೇಕ್ಷಕರಾಗಿದ್ದಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT