7

ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣ ಆಧುನೀಕರಣಕ್ಕೆ ಸೂಚನೆ

Published:
Updated:
ಹೊಳೆನರಸೀಪುರ ಸಾರಿಗೆ ಸಂಸ್ಥೆ ಬಸ್‌ನಿಲ್ದಾಣ ಮತ್ತು ಡಿಪೋಗೆ ಮಂಗಳವಾರ ಭೇಟಿ ನೀಡಿದ್ದ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರೊಂದಿಗೆ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಚರ್ಚೆ ನಡೆಸಿದರು

ಹೊಳೆನರಸೀಪುರ: ಇಲ್ಲಿನ ಬಸ್‌ ನಿಲ್ದಾಣಕ್ಕೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಆಧುನೀಕರಣಗೊಳಿಸಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಭರವಸೆ ನೀಡಿದರು.

ಇಲ್ಲಿನ ಬಸ್ ನಿಲ್ದಾಣವನ್ನು ಪರಿಶೀಲಿಸಿದ ಅವರಿಗೆ ನಿಲ್ದಾಣದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ, ‘ಈ ನಿಲ್ದಾಣ ನಿರ್ಮಿಸಿ 40 ವರ್ಷ ಕಳೆದಿವೆ. ಈ ಕಟ್ಟಡ ಶಿಥಿಲಗೊಂಡಿದ್ದು ನೂತನವಾಗಿ ನಿರ್ಮಿಸಬೇಕಿದೆ ಎಂದು ತಿಳಿಸಿದರು.

ನಿಲ್ದಾಣದಲ್ಲಿ ಆಗಬೇಕಾಗಿರುವ ಎಲ್ಲ ಕೆಲಸಗಳನ್ನು ಮಾಡಿಸಲು ಅಗತ್ಯ ಕ್ರಮ ತೆಗೆದುಕೊಳ್ಳಿ ಎಂದು ಡಿ.ಸಿ.ತಮ್ಮಣ್ಣ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಇಲ್ಲಿನ ಡಿಪೋಗೆ ಭೇಟಿ ನೀಡಿದ ತಮ್ಮಣ್ಣ ಅವರಿಗೆ, ಇಲ್ಲಿನ ಸಿಬ್ಬಂದಿಗೆ 50 ಮನೆಗಳ ನಿರ್ಮಿಸಬೇಕಿದ್ದು, ಅದಕ್ಕೆ ಸ್ಥಳಾವಕಾಶವೂ ಇದೆ ಎಂದು ರೇವಣ್ಣ ಹೇಳಿದರು. ಅದಕ್ಕೂ  ಸಮ್ಮತಿಸಿದರು. ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಉಮಾಶಂಕರ್‌, ವಿಭಾಗೀಯ ನಿಯಂತ್ರಣಾಧಿಕಾರಿ ಯಶವಂತ್‌ಕುಮಾರ್‌, ಘಟಕ ವ್ಯವಸ್ಥಾಪಕ ಜಗದೀಶ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !