ನುಗ್ಗೇಹಳ್ಳಿ: ‘ಹೋಬಳಿ ಕೇಂದ್ರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಒತ್ತಾಯಿಸಲಾಗುವುದು’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ ತಿಳಿಸಿದರು.

ಹೋಬಳಿ ಕೇಂದ್ರದಲ್ಲಿ ಹೊಯ್ಸಳ ಕ್ರಿಕೆಟರ್ಸ್ ವತಿಯಿಂದ ಆಯೋಜಿಸಿದ್ದ ಪ್ರೀಮಿಯರ್ ಲೀಗ್ ಸೀಸನ್ 1 ಕ್ರಿಕೆಟ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು.

‘ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳ ಜೊತೆಗೆ ಪಕ್ಷಾತೀತವಾಗಿ ಎಲ್ಲಾ ಶಾಸಕರ ಕ್ಷೇತ್ರಗಳಿಗೂ ಹೆಚ್ಚಿನ ಅನುದಾನ ನೀಡುತ್ತಿದೆ, ತಾಲ್ಲೂಕಿನಲ್ಲಿ ಏತ ನೀರಾವರಿ ಯೋಜನೆ ಸೇರಿದಂತೆ ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳಿಗೆ ಕಳೆದ ಎರಡೂವರೆ ವರ್ಷಗಳಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದೆ. ಕಳೆದ ಚುನಾವಣೆಯಲ್ಲಿ ಅಲ್ಪ ಮತಗಳಿಂದ ಸೋತಿದ್ದೇನೆ, ಸೋಲನ್ನೇ ಸವಾಲಾಗಿ ಸ್ವೀಕರಿಸಿ ಕ್ಷೇತ್ರದ ಜನರ ಕಷ್ಟ ಸುಖಗಳಿಗೆ ಸದಾ ಸ್ಪಂದಿಸುತ್ತಿದ್ದೇನೆ’ ಎಂದರು.

ಮುಖಂಡರಾದ ಎನ್.ಎಸ್.ಪ್ರಕಾಶ್, ಬಾಣನಕೆರೆ ಅಶೋಕ್, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಅವೇರಹಳ್ಳಿ ವೇಣು, ನಟರಾಜ್ ಯಾದವ್, ಶಿಕ್ಷಕ ನಂಜುಂಡಿ, ಪ್ರದೀಪ್, ಅಚ್ಚು, ಆಟಗಾರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-36-1980268226

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.